ಮಂಗಳವಾರ, ಆಗಸ್ಟ್ 9, 2022
23 °C

ಸಂಪಾಜೆಯಲ್ಲಿ 10 ಸೆಂ.ಮೀ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗುರುವಾರ ಬಿರುಸಿನ ಮಳೆ ಮುಂದುವರಿದಿದೆ. ಸಂಪಾಜೆಯಲ್ಲಿ ಕಳೆದ 12 ಗಂಟೆಗಳ ಅವಧಿಯಲ್ಲಿ 10 ಸೆಂ.ಮೀಗೂ ಅಧಿಕ ಮಳೆ ಸುರಿದಿದೆ. ಪೆರಾಜೆಯಲ್ಲಿ 8, ಭಾಗಮಂಡಲ ಹಾಗೂ ಕರಿಕೆಯಲ್ಲಿ 7 ಸೆಂ.ಮೀ ಮಳೆಯಾಗಿದೆ. ಜಿಲ್ಲೆಯ ಬಹತೇಕ ಎಲ್ಲ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಗಾಳಿಯು ರಭಸದಿಂದ ಬೀಸುತ್ತಿದೆ.

ಉಳಿದಂತೆ, ಗಾಳಿಬೀಡು ಹಾಗೂ ಚೆಂಬುವಿನಲ್ಲಿ 6, ಬೆಲ್ಲಮಾವಟಿಯಲ್ಲಿ 5, ವಿರಾಜಪೇಟೆ, ಎಮ್ಮೆಮಾಡು, ಬಿಟ್ಟಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 4, ಸೋಮವಾರಪೇಟೆಯಲ್ಲಿ 3 ಸೆಂ.ಮೀ ಮಳೆಯಾಗಿದೆ.

ಮುಂದಿನ 24 ಗಂಟೆಗಳ ಅವಧಿಯಲ್ಲಿ ಸಾಮಾನ್ಯಕ್ಕಿಂತಲೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತವಾರಿ ಕೇಂದ್ರ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು