ಶುಕ್ರವಾರ, 17 ಅಕ್ಟೋಬರ್ 2025
×
ADVERTISEMENT
ADVERTISEMENT

Kaveri Theerthodbhava | ತಲಕಾವೇರಿ: ಆ ‘ಕ್ಷಣ’ಕ್ಕಾಗಿ ಭಕ್ತರ ಕಾತರ

ತಲಕಾವೇರಿಯಲ್ಲಿ ಇಂದು ಮಧ್ಯಾಹ್ನ 1.44ಕ್ಕೆ ಮುಹೂರ್ತ ನಿಗದಿ, ಲಕ್ಷಾಂತರ ಭಕ್ತರ ಆಗಮನದ ನಿರೀಕ್ಷೆ
Published : 17 ಅಕ್ಟೋಬರ್ 2025, 4:07 IST
Last Updated : 17 ಅಕ್ಟೋಬರ್ 2025, 4:07 IST
ಫಾಲೋ ಮಾಡಿ
Comments
ಕಾವೇರಿ ಪವಿತ್ರ ತೀರ್ಥೋದ್ಭವಕ್ಕಾಗಿ ತಲಕಾವೇರಿ ಕ್ಷೇತ್ರದಲ್ಲಿ ಸಿದ್ಧತಾ ಕಾರ್ಯಗಳು ಗುರುವಾರ ನಡೆದವು
ಕಾವೇರಿ ಪವಿತ್ರ ತೀರ್ಥೋದ್ಭವಕ್ಕಾಗಿ ತಲಕಾವೇರಿ ಕ್ಷೇತ್ರದಲ್ಲಿ ಸಿದ್ಧತಾ ಕಾರ್ಯಗಳು ಗುರುವಾರ ನಡೆದವು
ಕಾವೇರಿ ಪವಿತ್ರ ತೀರ್ಥೋದ್ಭವಕ್ಕಾಗಿ ತಲಕಾವೇರಿ ಕ್ಷೇತ್ರದಲ್ಲಿ ಸಿದ್ಧತಾ ಕಾರ್ಯಗಳು ಗುರುವಾರ ನಡೆದವು
ಕಾವೇರಿ ಪವಿತ್ರ ತೀರ್ಥೋದ್ಭವಕ್ಕಾಗಿ ತಲಕಾವೇರಿ ಕ್ಷೇತ್ರದಲ್ಲಿ ಸಿದ್ಧತಾ ಕಾರ್ಯಗಳು ಗುರುವಾರ ನಡೆದವು
ಪ್ರತೀ ವರ್ಷದಂತೆ ಈ ವರ್ಷವೂ ಸಹ ಶ್ರೀ ಕಾವೇರಿ ಪವಿತ್ರ ತೀರ್ಥೋದ್ಭವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪೂಜಾ ವಿಧಿ ವಿಧಾನಗಳು ನಡೆಯಲಿವೆ
ಕೋಡಿ ಮೋಟಯ್ಯ ತಕ್ಕ ಮುಖ್ಯಸ್ಥ.
ಭಾಗಮಂಡಲ ಭಗಂಡೇಶ್ವರ ದೇವಾಲಯದಲ್ಲಿಯೂ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ತ್ರಿವೇಣಿ ಸಂಗಮದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ
ಚಂದ್ರಶೇಖರ್ ಭಗಂಡೇಶ್ವರ-ತಲಕಾವೇರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ.
ಉಚಿತ ಪ್ರಯಾಣಕ್ಕೆ ಅವಕಾಶ; ಆರ್.ಐಶ್ವರ್ಯ
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ ‘ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅ. 17 ರಂದು ಮಧ್ಯಾಹ್ನ 1.44 ಗಂಟೆಗೆ ಪವಿತ್ರ ತೀರ್ಥೋದ್ಭವ ನಡೆಯಲಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು. ತಲಕಾವೇರಿ ಪವಿತ್ರ ಕುಂಡಿಕೆ ಬಳಿ ಹೂವಿನ ಅಲಂಕಾರ ದೀಪಾಲಂಕಾರ ಮಾಡಲಾಗಿದೆ. ಭಾಗಮಂಡಲದಿಂದ ತಲಕಾವೇರಿಗೆ ತಲಕಾವೇರಿಯಿಂದ ಭಾಗಮಂಡಲದವರೆಗೆ 25 ಕೆಎಸ್‍ಆರ್‌ಟಿಸಿ ಬಸ್‍ಗಳು ಸಂಚರಿಸಲಿದ್ದು ಈ ಮಾರ್ಗದಲ್ಲಿ ಭಕ್ತಾದಿಗಳು ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಹೇಳಿದರು.
12 ಅರ್ಚಕ ವೃಂದ ಸಿದ್ಧ; ಗುರುರಾಜ್ ಆಚಾರ್
ಪ್ರಧಾನ ಅರ್ಚಕರಾದ ಗುರುರಾಜ್ ಆಚಾರ್ ಮಾತನಾಡಿ ‘ಪವಿತ್ರ ತೀರ್ಥೋದ್ಭವದಂದು ಮಹಾ ಸಂಕಲ್ಪ ಕುಂಕುಮಾರ್ಚನೆ ಸೇರಿದಂತೆ ಪೂಜಾ ವಿಧಿ ವಿಧಾನಗಳು ಬೆಳಿಗ್ಗೆಯಿಂದಲೇ ಆರಂಭವಾಗಲಿದೆ. ಸಂಜೆ ವೇಳೆಯಲ್ಲಿ ಮಹಾಪೂಜೆ ಹಾಗೂ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿವೆ’ ಎಂದು ತಿಳಿಸಿದರು. ಪೂಜಾ ಕಾರ್ಯಕ್ರಮದಲ್ಲಿ 12 ಜನರನ್ನು ಒಳಗೊಂಡ ಅರ್ಚಕರ ತಂಡ ಪೂಜಾ ವಿಧಿವಿಧಾನ ನಡೆಸಿಕೊಡಲಿದ್ದಾರೆ. ಅ. 17ರಿಂದ ಒಂದು ತಿಂಗಳ ಕಾಲ ಪೂಜಾ ಕಾರ್ಯಗಳು ನಡೆಯಲಿದೆ. ಈ ಮಾಸದಲ್ಲಿ ಗಂಗೆ ಸ್ನಾನ ಮಾಡಿದರೆ ಪುಣ್ಯ ಬರುತ್ತದೆ ಎಂಬ ಪ್ರತೀತಿ ಇದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT