ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭತ್ತದ ಕೃಷಿ ಬತ್ತಿ ಹೋಗದಂತೆ ಕಾಪಾಡಿ: ಸಚಿವ ಎನ್.ಎಸ್.ಭೋಸರಾಜ್

ಕೊಡಗು ಜಿಲ್ಲಾ ಉಸ್ತುವಾರಿ ಸಚಿವನ ಎನ್.ಎಸ್.ಭೋಸರಾಜು ಮನವಿ
Published : 15 ಆಗಸ್ಟ್ 2024, 3:10 IST
Last Updated : 15 ಆಗಸ್ಟ್ 2024, 3:10 IST
ಫಾಲೋ ಮಾಡಿ
Comments

ಮಡಿಕೇರಿ: ‘ಯಾವುದೇ ಕಾರಣಕ್ಕೂ ಭತ್ತದ ಕೃಷಿಯನ್ನು ಕೈಬಿಡಬಾರದು. ಕೊಡಗು ಜಿಲ್ಲೆಯಲ್ಲಿ ಭತ್ತದ ಕೃಷಿ ಬತ್ತದಂತೆ ನೋಡಿಕೊಳ್ಳಬೇಕು’ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಮನವಿ ಮಾಡಿದರು.

ವಿರಾಜಪೇಟೆ ತಾಲ್ಲೂಕಿನ ಬೊಳ್ಳುಮಾಡು ಗ್ರಾಮದ ಮಾತಂಡ ಶಕು ಅಕ್ಕಮ್ಮ ಹಾಗೂ ಮನು ಅವರ ಗದ್ದೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಬುಧವಾರ ನಡೆದ ‘ಬೇಲ್ ನಮ್ಮೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಭತ್ತವೇ ಪ್ರಮುಖ ಆಹಾರ ಬೆಳೆಯಾಗಿದೆ. ರೈತರು ಭತ್ತದ ಕೃಷಿಯನ್ನು ವಿಸ್ತರಿಸಬೇಕು. ಇದರಿಂದ ಅಂತರ್ಜಲ ಹೆಚ್ಚಾಗುತ್ತದೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು’ ಎಂದು ಹೇಳಿದರು.

‘ಭತ್ತಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲು ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಭತ್ತ ಬಿತ್ತನೆ ಬೀಜವನ್ನು ಸಹಾಯಧನದಡಿ ನೀಡಲಾಗುತ್ತದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲಾಗುತ್ತದೆ. ಸಹಾಯಧನದಡಿ ಪವರ್ ಟಿಲ್ಲರ್, ಭತ್ತದ ನಾಟಿ ಯಂತ್ರ ಒದಗಿಸಲಾಗುತ್ತದೆ. ಕರ್ನಾಟಕ ಕೃಷಿ ಸಮೃದ್ಧಿ ಯೋಜನೆ ಪ್ರಸಕ್ತ ಬಜೆಟ್‍ನಲ್ಲಿ ಘೋಷಣೆಯಾಗಿದೆ’ ಎಂದು ವಿವರಿಸಿದರು.

ಕಾರ್ಯಕ್ರಮಕ್ಕೂ ಮೊದಲು ನಾಟಿ ಓಟ, ಹಗ್ಗ ಜಗ್ಗಾಟ ಸೇರಿದಂತೆ ಹಲವು ಕೆಸರು ಗದ್ದೆ ಕ್ರೀಡಾಕೂಟಗಳು ನಡೆದವು. ಸಚಿವರನ್ನು ಕೊಡವ ವಾದ್ಯದೊಂದಿಗೆ ಸ್ವಾಗತಿಸಿ, ರಾಷ್ಟ್ರಧ್ವಜ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು.

ಬೇಲ್‍ನಮ್ಮೆ ಕಾರ್ಯಕ್ರಮದಲ್ಲಿ ‘ಮನೆಮನೆಯಲ್ಲೂ ರಾಷ್ಟ್ರಧ್ವಜ’ (ಹರ್ ಘರ್ ತಿರಂಗಾ) ಅಭಿಯಾನದ ಪ್ರಯುಕ್ತ ತ್ರಿವರ್ಣ ಧ್ವಜವಿಡಿದು ಸಚಿವರು, ಶಾಸಕರು ಮೆರವಣಿಗೆ ನಡೆಸಿದರು.

ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ,  ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಹಾಗೂ ಅಕಾಡೆಮಿ ಸದಸ್ಯರು ಭತ್ತ ನಾಟಿ ಮಾಡಿ ಗಮನ ಸೆಳೆದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಸೋಮಶೇಖರ್, ವಿರಾಜಪೇಟೆ ತಹಶೀಲ್ದಾರ್ ಎಚ್.ಎನ್.ರಾಮಚಂದ್ರ, ಕಾಕೋಟುಪರಂಬು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಟ್ಟಕಾಳಂಡ ಕಾಮುಣಿ ಸುರೇಶ್, ಬೊಳ್ಳುಮಾಡು ವಿ.ಎಸ್.ಎಸ್.ಎನ್. ಅಧ್ಯಕ್ಷ ಮಾತಂಡ ಬೇಬ ಪೂವಯ್ಯ, ಬೊಳ್ಳುಮಾಡು ಗ್ರಾಮ ಪಂಚಾಯಿತಿಯ ಸಂಜು ಕಾಳಯ್ಯ, ರಿಜಿಸ್ಟ್ರಾರ್ ಅಜ್ಜಿಕುಟ್ಟಿರ ಗಿರೀಶ್, ಸದಸ್ಯರಾದ ಪುತ್ತರಿರಿ ಪಪ್ಪು ತಿಮ್ಮಯ್ಯ, ಚೊಟ್ಟೆಯಂಡ ಸಂಜು ಕಾವೇರಪ್ಪ, ಪೊನ್ನಿರ ಯು. ಗಗನ್, ಕೊಂಡಿಜಮ್ಮನ ಎಂ.ಬಾಲಕೃಷ್ಣ, ಕಂಬೆಯಂಡ ಡೀನಾ ಬೋಜಣ್ಣ, ಮೊಳ್ಳೆಕುಟ್ಟಡ ದಿನು ಬೋಜಪ್ಪ, ಪಾನಿಕುಟ್ಟಿರ ಕೆ.ಕುಟ್ಟಪ್ಪ, ಕುಡಿಯರ ಕಾವೇರಪ್ಪ, ನಾಯಂದಿರ ಆರ್.ಶಿವಾಜಿ, ಚೆಪ್ಪುಡಿರ ಎಸ್.ಉತ್ತಪ್ಪ, ನಾಯಕಂಡ ಬೇಬಿ ಚಿಣ್ಣಪ್ಪ, ನಾಪಂಡ ಸಿ.ಗಣೇಶ್ ಭಾಗವಹಿಸಿದ್ದರು.

ಕೊಡಗು ವಿಜ್ಞಾನ ವೇದಿಕೆಯ ಅಧ್ಯಕ್ಷ ಡಾ.ಚೆಪ್ಪುಡಿರ ಜಿ.ಕುಶಾಲಪ್ಪ ಅವರು ಕೃಷಿ ಕ್ಷೇತ್ರದ ಕುರಿತು ಮಾತನಾಡಿದರು. ಬೊಳ್ಳುಮಾಡು ಗ್ರಾಮದ ಮಹಿಳಾ ಕೃಷಿಕರಾದ ಮಾತಂಡ ಶಕುಅಕ್ಕಮ್ಮ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.

ವಿರಾಜಪೇಟೆ ತಾಲ್ಲೂಕಿನ ಬೊಳ್ಳುಮಾಡು ಗ್ರಾಮದ ಮಾತಂಡ ಶಕು ಅಕ್ಕಮ್ಮ ಹಾಗೂ ಮನು ಅವರ ಗದ್ದೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಬುಧವಾರ ನಡೆದ ‘ಬೇಲ್ ನಮ್ಮೆ’ ಕಾರ್ಯಕ್ರಮದಲ್ಲಿ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಶಾಸಕರಾದ ಎ.ಎಸ್.ಪೊನ್ನಣ್ಣ ಡಾ.ಮಂತರ್‌ಗೌಡ ನಾಟಿ ಮಾಡಿದರು
ವಿರಾಜಪೇಟೆ ತಾಲ್ಲೂಕಿನ ಬೊಳ್ಳುಮಾಡು ಗ್ರಾಮದ ಮಾತಂಡ ಶಕು ಅಕ್ಕಮ್ಮ ಹಾಗೂ ಮನು ಅವರ ಗದ್ದೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಬುಧವಾರ ನಡೆದ ‘ಬೇಲ್ ನಮ್ಮೆ’ ಕಾರ್ಯಕ್ರಮದಲ್ಲಿ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಶಾಸಕರಾದ ಎ.ಎಸ್.ಪೊನ್ನಣ್ಣ ಡಾ.ಮಂತರ್‌ಗೌಡ ನಾಟಿ ಮಾಡಿದರು
‘ಬೇಲ್ ನಮ್ಮೆ’ಯಲ್ಲಿ ಸಚಿವ ಎನ್.ಎಸ್.ಭೋಸರಾಜು ಅವರು ರಾಷ್ಟ್ರಧ್ವಜವಿಡಿದು ಹೆಜ್ಜೆ ಹಾಕಿದರು
‘ಬೇಲ್ ನಮ್ಮೆ’ಯಲ್ಲಿ ಸಚಿವ ಎನ್.ಎಸ್.ಭೋಸರಾಜು ಅವರು ರಾಷ್ಟ್ರಧ್ವಜವಿಡಿದು ಹೆಜ್ಜೆ ಹಾಕಿದರು
ಕಾಡಾನೆ ಹಾವಳಿಯಿಂದ ಭತ್ತ ಬೆಳೆಯುವುದು ಕಡಿಮೆಯಾಗುತ್ತಿದೆ. ಆದ್ದರಿಂದ ಭತ್ತ ಬೆಳೆಯಲು ಉತ್ತೇಜಿಸುವಲ್ಲಿ ಹೆಚ್ಚಿನ ಸಹಾಯಧನ ಕಲ್ಪಿಸಬೇಕು ಮಂಡೇಪಂಡ
ಸುಜಾ ಕುಶಾಲಪ್ಪ ವಿಧಾನ ಪರಿಷತ್ ಸದಸ್ಯ.
ಅಕಾಡೆಮಿ ವತಿಯಿಂದ ಕೃಷಿ ಕಲೆ ಸಂಸ್ಕೃತಿ ಸಾಹಿತ್ಯ ಚಟುವಟಿಕೆಗೆ ಹೆಚ್ಚಿನ ಗಮನಹರಿಸಲಾಗಿದೆ. ಕೃಷಿ ಉಳಿದಲ್ಲಿ ಕೊಡವ ಸಂಸ್ಕೃತಿ ಉಳಿದಂತೆ. ಆ ನಿಟ್ಟಿನಲ್ಲಿ ಕೃಷಿಗೆ ಪೂರಕವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ
ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ .

ಕೃಷಿ ಪದ್ಧತಿ ಉಳಿಸಿ ಕೊಡವ ಸಂಸ್ಕೃತಿ ಬೆಳೆಸಿ; ಎ.ಎಸ್.ಪೊನ್ನಣ್ಣ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಮಾತನಾಡಿ ‘ಕೊಡಗು ಕೃಷಿ ಪ್ರಧಾನ ಜಿಲ್ಲೆಯಾಗಿದ್ದು ಕೃಷಿಯನ್ನು ನಂಬಿ ಬದುಕು ಕಟ್ಟಿಕೊಂಡು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಕೃಷಿ ಪದ್ದತಿಯನ್ನು ಉಳಿಸಿಕೊಂಡು ಕೊಡವ ಸಂಸ್ಕೃತಿಯನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು’ ಎಂದು ಹೇಳಿದರು.

ಭತ್ತದ ಕೃಷಿ ಕಡಿಮೆಯಾಗುತ್ತಿದೆ; ಮಂತರ್‌ಗೌಡ ಶಾಸಕ ಡಾ.ಮಂತರ್‌ಗೌಡ ಮಾತನಾಡಿ ‘ಕೊಡಗು ಜಿಲ್ಲೆಯಲ್ಲಿ ಭತ್ತ ಬೆಳೆಯುವುದು ಕಡಿಮೆಯಾಗಿದೆ. ಹವಾಮಾನ ವೈಪರೀತ್ಯದಿಂದ ಕೃಷಿ ಮಾಡುವುದು ವರ್ಷದಿಂದ ವರ್ಷಕ್ಕೆ ಕಷ್ಟವಾಗುತ್ತಿದೆ. ಅಂತರ್ಜಲ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸಿ ಕೃಷಿಯನ್ನು ಮುಂದುವರಿಸಿಕೊಂಡು ಹೋಗಬೇಕಿದೆ. ಆ ನಿಟ್ಟಿನಲ್ಲಿ ಭತ್ತ ಬೆಳೆಯುವುದು ಹೆಚ್ಚಾಗಬೇಕು’ ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT