ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಬೆಟ್ಟಗೇರಿ ತಂಡ ಪ್ರಥಮ ಸ್ಥಾನ ಗಳಿಸಿದರೆ, ನಾಪೋಕ್ಲುವಿನ ವಿವೇಕಾನಂದ ತಂಡ ದ್ವಿತೀಯ ಸ್ಥಾನ ಗಳಿಸಿತು. ಕಬಡ್ಡಿ ಪಂದ್ಯಾಟದಲ್ಲಿ ಬೆಟ್ಟಗೇರಿ ತಂಡ ಪ್ರಥಮ ಸ್ಥಾನ ಗಳಿಸಿದರೆ, ಕಕ್ಕುಂದ ಕಾಡಿನ ಗಣಪತಿ ಸೇವಾ ಸಮಿತಿ ತಂಡ ದ್ವಿತೀಯ ಸ್ಥಾನ ಪಡೆಯಿತು. ಮಹಿಳೆಯರಿಗೂ ಹಗ್ಗಜಗ್ಗಾಟ ಸ್ಪರ್ಧೆ, ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.