ಸೋಮವಾರಪೇಟೆ: ಬಾಲಕಿಯನ್ನು ಅಪಹರಣ ಮಾಡಿದ್ದ ಹೊರರಾಜ್ಯದ ಆರೋಪಿಗೆ ಮಡಿಕೇರಿ 1ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯ 5 ವರ್ಷ ಕಠಿಣ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಅಸ್ಸಾಂ ಮೂಲದ ಸುರಜ್ ಅಲಿಯಾಸ್ ಸುರಸ್ ಆಲಿ ಅಪರಾಧಿ. ಮತ್ತಿಕಾಡು ಗ್ರಾಮದ ಅತ್ತೂರು-ನಲ್ಲೂರು ಗೇರುಬಾಣೆಯ ಬಿ ಎಸ್ಟೇಟ್ ಲೈನ್ ಮನೆಯಲ್ಲಿ ವಾಸವಿದ್ದ ಅಪರಾಧಿ, ಅದೇ ಲೈನ್ ಮನೆಯಲ್ಲಿ ವಾಸವಿದ್ದ ಬಾಲಕಿಯನ್ನು ಅಪಹರಣ ಮಾಡಿದ್ದ ಎಂದು ಬಾಲಕಿ ಪೋಷಕರು ನೀಡಿದ್ದ ದೂರಿನಂತೆ ಸುಂಠಿಕೊಪ್ಪ ಪೊಲೀಸ್ ಠಾಣೆಯಲ್ಲಿ 2021ರ ಆಗಸ್ಟ್ನಲ್ಲಿ ಪೋಕ್ಸೊ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಅರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.

ಸದರಿ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಎಚ್.ಎಂ.ಶೈಲೇಂದ್ರ ಅವರು ಆರೋಪಿಯ ವಿರುದ್ಧ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕ ಎನ್.ಪಿ.ದೇವೆಂದ್ರನ್ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಜಿ. ಪ್ರಶಾಂತಿ ತೀರ್ಪು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.