ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗರಹಳ್ಳಿ; ವಾರ್ಷಿಕೋತ್ಸವ ನಾಳೆ

Published 28 ಏಪ್ರಿಲ್ 2024, 4:34 IST
Last Updated 28 ಏಪ್ರಿಲ್ 2024, 4:34 IST
ಅಕ್ಷರ ಗಾತ್ರ

ಸುಂಟಿಕೊಪ್ಪ: ಸಮೀಪದ ಕೊಡಗರಹಳ್ಳಿಯ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದ ವಾರ್ಷಿಕೋತ್ಸವವು ಏ.29ರಂದು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ನಡೆಯಲಿದೆ.

ಅಂದು ಬೆಳಿಗ್ಗೆ 7 ಗಂಟೆಗೆ ಮಹಾಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ ನಂತರ ಅನ್ನ ಸಂತರ್ಪಣೆ ನಡೆಯಲಿದೆ.


ವಾರ್ಷಿಕೋತ್ಸವದ ಅಂಗವಾಗಿ ಮಧ್ಯಾಹ್ನದ ನಂತರ ದೇವಾಲಯದ ತಕ್ಕರ ಮನೆಯಿಂದ ಭಂಡಾರ ತಂದು ದೇವಾಲಯದಲ್ಲಿ ಹಬ್ಬದ ವಿಧಿವಿದಾನ ನಡೆಸಲಾಗುತ್ತದೆ.

ಏ. 26 ಶುಕ್ರವಾರದಂದು ಬಸವೇಶ್ವರ ದೇವರ ಉತ್ಸವವು ನಡೆಯಿತು. ಸಂಪ್ರಾದಾಯದಂತೆ ದೇವತಕ್ಕರಾದ ಜಗ್ಗರಂಡ ಹ್ಯಾರಿಕಾರ್ಯಪ್ಪ ಅವರ ಮನೆಯಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದ ಬಳಿಕ ಎತ್ತುಪೋರಾಟದೊಂದಿಗೆ ಬಸವೇಶ್ವರ ಸನ್ನಿದಾನವನ್ನು ಪ್ರವೇಶಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT