ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10ರಂದು ಕಗ್ಗೋಡ್ಲುವಿನಲ್ಲಿ ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ

Last Updated 16 ಜುಲೈ 2019, 13:23 IST
ಅಕ್ಷರ ಗಾತ್ರ

ಮಡಿಕೇರಿ: ಜಿಲ್ಲಾ ಪಂಚಾಯಿತಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿಯ ನೆಹರು ಯುವ ಕೇಂದ್ರ, ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ಹಾಗೂ ಜಿಲ್ಲಾ ಯುವ ಒಕ್ಕೂಟದ ಆಶ್ರಯದಲ್ಲಿ ಆ.10ರಂದು ರಾಜ್ಯಮಟ್ಟದ ಮುಕ್ತ ಕೆಸರುಗದ್ದೆ ಕ್ರೀಡಾಕೂಟ ಆಯೋಜಿಸಲು ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕಗ್ಗೋಡ್ಲು ಗ್ರಾಮದ ಸಿ.ಡಿ.ಬೋಪಯ್ಯ ಅವರ ಗದ್ದೆಯಲ್ಲಿ ಕ್ರೀಡಾಕೂಟ ನಡೆಯಲಿದೆ. ಕೆಸರುಗದ್ದೆ ಕ್ರೀಡಾಕೂಟದಲ್ಲಿ ವಾಲಿಬಾಲ್, ಹಗ್ಗಜಗ್ಗಾಟ, ಥ್ರೋಬಾಲ್ ಹಾಗೂ ಇನ್ನಿತರ ಕ್ರೀಡೆಗಳನ್ನು ಆಯೋಜಿಸಲಾಗಿದೆ.

ವಿಜೇತ ತಂಡಗಳಿಗೆ ನಗದು ಬಹುಮಾನ, ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು. ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳು ಹೆಸರು ನೋಂದಾಯಿಸಲು ಆಗಸ್ಟ್ 9 ಕೊನೆ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷರಾದ ನವೀನ್ ದೇರಳ: 94499 52008, 97404 04520, ಕಾರ್ಯದರ್ಶಿಯಾದ ಬಾಳಡಿ ದಿಲೀಪ್: 94806 74546 ಅವರನ್ನು ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT