ಮಡಿಕೇರಿ: ಆಮ್ ಆದ್ಮಿ ಪಕ್ಷದ (ಎಎಪಿ) ಜಿಲ್ಲಾ ಕಚೇರಿ ಮಡಿಕೇರಿಯ ಮಹದೇವಪೇೆಟೆಯಲ್ಲಿ ಆರಂಭವಾಗಿದ್ದು, ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಹೇಳಿಕೊಳ್ಳಬಹುದು ಮತ್ತು ಸಲಹೆಗಳನ್ನೂ ನೀಡಬಹುದು ಎಂದು ಪಕ್ಷದ ಕಾನೂನು ಸಲಹೆಗಾರ ಕೆ.ಪಿ.ಬಾಲಸುಬ್ರಹ್ಮಣ್ಯ ಹೇಳಿದರು.

ಪ್ರಸ್ತುತ ಬೆಲೆ ಏರಿಕೆಯಿಂದ ಜನಸಾಮಾನ್ಯರ ಸ್ಥಿತಿ ಚಿಂತಾಜನಕವಾಗಿದೆ. ಸತತವಾದ ಬೆಲೆ ಏರಿಕೆಯಿಂದ ಅವರು ಕಂಗೆಟ್ಟಿದ್ದಾರೆ ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು. ಬೆಲೆ ಏರಿಕೆ ಮಾಡಿದರೆ ತೈಲದ ಕೊರತೆ ನೀಗುತ್ತಾ ಎಂದು ಪ್ರಶ್ನಿಸಿದ ಅವರು, ಬೆಲೆ ಏರಿಕೆಯಿಂದ ತೈಲ ಕಂಪನಿಗಳಿಗೆ ಲಾಭವಾಗುತ್ತದೆ. ಜನಸಾಮಾನ್ಯರು ಈ ಕುರಿತು ಗಮನ ಹರಿಸಬೇಕು ಎಂದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ಅಪ್ಪಯ್ಯ ಮಾತನಾಡಿ, ‘ಕೊಡಗು ಜಿಲ್ಲೆಯ ಸಮಸ್ಯೆಗಳು ಹಾಗೂ ಇಲ್ಲಿನ ಜನಸಾಮಾನ್ಯರ ಸಮಸ್ಯೆಗಳ ಕುರಿತು ಪಕ್ಷವು ಗಮನ ಹರಿಸಲಿದೆ. ಪಕ್ಷದ ನೂತನ ಕಚೇರಿ ಸಮಸ್ಯೆಗಳ ಪರಿಹಾರಕ್ಕೆ ಸದಾ ಸಕ್ರಿಯವಾಗಿರುತ್ತದೆ’ ಎಂದು ತಿಳಿಸಿದರು. ಪಕ್ಷದ ಯುವ ಘಟಕದ ಅಧ್ಯಕ್ಷ ಎಂ.ಕೆ.ಆಶಿಕ್ ಮಾತನಾಡಿ, ಕೊಡಗು ಜಿಲ್ಲೆಯ ಯುವಕರು, ಯುವತಿಯರು ಪಕ್ಷದ ಸದಸ್ಯತ್ವ ಪಡೆದು ಕೈಜೋಡಿಸಬೇಕು’ ಎಂದು ಮನವಿ ಮಾಡಿದರು. ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಚ್.ಬಿ.ಪೃಥ್ವಿ, ಸದಸ್ಯ ಮಂಜುನಾಥ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-51-974783392

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.