ಕುಶಾಲನಗರ: ಕೊಡಗಿನಲ್ಲಿ ಕೃಷಿ, ಕಾಫಿ, ಏಲಕ್ಕಿ, ಕಾಳು ಮೆಣಸು ಸೇರಿ ಪ್ರಮುಖ ಕೖಷಿ ಇಂದು ತೀವ್ರ ಸಂಕಷ್ಟದಲ್ಲಿದೆ. ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮದ ಮೂಲಕ ರೈತರಿಗೆ ಹೆಚ್ಚುವರಿ ಆದಾಯ ಒದಗಿಸುವ ಮತ್ತು ಪ್ರವಾಸಿಗರಿಗೆ ಅದ್ಭುತ ಅನುಭವ ನೀಡುವ ಹಲವಾರು ಅವಕಾಶಗಳಿವೆ ಎಂದು ಸಂಪನ್ಮೂಲ ವ್ಯಕ್ತಿ ಆರ್.ಕೆ.ಬಾಲಚಂದ್ರ ಅಭಿಪ್ರಾಯಪಟ್ಟಿದ್ದಾರೆ.

ಕೊಡಗು ಪತ್ರಕರ್ತರ ಸಂಘ ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ಮಂಗಳವಾರ ಇಲ್ಲಿನ ಗೌಡ ಸಮಾಜದಲ್ಲಿ ಆಯೋಜಿಸಿದ್ದ ನೇಗಿಲಯೋಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮ-ಹಲವು ಆಯಾಮಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ಕೊಡಗಿನಲ್ಲಿ ಸುಮಾರು 1.05 ಲಕ್ಷ ಹೆಕ್ಟೇರ್ ಕಾಫಿ ತೋಟವಿದೆ. ಭಾರತದ ಒಟ್ಟು ಕಾಫಿ ಉತ್ಪಾದನೆಯ ಸುಮಾರು ಶೇ 30ರಷ್ಟು ಇಲ್ಲೇ ಬೆಳೆಯುತ್ತದೆ. ಆದರೆ, ಕಳೆದ ಎರಡು ದಶಕಗಳಲ್ಲಿ ಕಾಫಿ ಬೆಲೆಯ ಏರಿಳಿತ, ಹವಾಮಾನ ಬದಲಾವಣೆ, ಕೂಲಿ ಕರ್ಮಿಕರ ಕೊರತೆ, ಕಾಡಾನೆ ಹಾವಳಿ ಇವೆಲ್ಲ ರೈತರ ನಿದ್ದೆ ಕೆಡಿಸಿವೆ. 2018ರ ಭೀಕರ ಪ್ರವಾಹ ಮತ್ತು ಭೂಕುಸಿತ ಕೊಡಗಿನ ಕೃಷಿಕರನ್ನು ಹೈರಾಣಾಗಿಸಿದೆ. ಇದರಿಂದಾಗಿ ಯುವ ತಲೆಮಾರು ಬೆಂಗಳೂರಿಗೆ ವಲಸೆ ಹೋಗುತ್ತಿದ್ದಾರೆ. ತೋಟ ಉಳಿಸಿಕೊಳ್ಳಲು ದಾರಿ ಕಾಣದೆ ಕಾಫಿ ಬೆಳೆಗಾರರ ಮಕ್ಕಳು ಬೆಂಗಳೂರಿನಲ್ಲಿ ಕಾಫಿ ಮಾರುವ ಪರಿಸ್ಥಿತಿಗೆ ತಲುಪಿದ್ದಾರೆ ಎಂದರು.

ಕೊಡಗು ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ. ಕೇಶವಕಾಮತ್, ನೇಗಿಲಯೋಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೊಡಗು ಪತ್ರಕರ್ತ ಸಂಘದ ಅಧ್ಯಕ್ಷ ಹೆಚ್.ಟಿ.ಅನಿಲ್, ಸುಂಟಿಕೊಪ್ಪದ ಉದ್ಯಮಿ ಎಸ್.ಜಿ. ಶ್ರೀನಿವಾಸ್ ಮಾತನಾಡಿದರು.

ಗುಡ್ಡೆಹೊಸೂರಿನ ಉದ್ಯಮಿ ಮಂಡೆಪಂಡ ಚಿಮ್ಮ ಉತ್ತಪ್ಪ ಕುಶಾಲನಗರ ಸಂಘ ರೈತರಿಗಾಗಿ ರೂಪಿಸಿರುವ ನೇಗಿಲಯೋಗಿ ದತ್ತಿ ಪ್ರಶಸ್ತಿಗೆ ತಾನು ಕೂಡಾ ₹25 ಸಾವಿರ ನೀಡುವುದಾಗಿ ಘೋಷಿಸಿದರು.

ತಾಲ್ಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಬಿ.ಸಿ.ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ಚಿಕ್ಕಬೆಟ್ಟಗೇರಿಯ ಉದ್ಯಮಿ, ದಾನಿ ಎಂ.ಎಸ್.ರಂಜಿತ್, ಸಂಘದ ಸಲಹೆಗಾರ ಕೆ.ತಿಮ್ಮಪ್ಪ, ಖಜಾಂಚಿ ಕೆ.ಎಸ್. ಅನಿಲ್ ಕುಮಾರ್, ನಿರ್ದೇಶಕ ಸಿಲ್ವೆಸ್ಟರ್, ವಿಶ್ವಕುಮಾರ್, ರವಿಕುಮಾರ್, ಆಲ್ಫ್ರೆಡ್, ಉಪಾಧ್ಯಕ್ಷ ನವೀನ್ ಚಿಣ್ಣಪ್ಪ, ತಾಲ್ಲೂಕು ಸಂಘದ ಪ್ರಧಾನ ಕಾರ್ಯದರ್ಶಿ ವಿನ್ಸೆಂಟ್, ನಿರ್ದೇಶಕ ಶಿವಣ್ಣ, ಜಿ.ಕೆ.ಬಾಲಕೃಷ್ಣ, ಎಂ.ಎಸ್.ಸುನಿಲ್, ಸೋನ್ಸ್, ವಿರಾಜಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮುದೋಷ್ ಪೂವಯ್ಯ ಪಾಲ್ಗೊಂಡಿದ್ದರು.

ಶ್ರದ್ಧಾಂಜಲಿ: ಗೌಡ ಸಮುದಾಯದ ಮುಖಂಡ, ಹಿರಿಯ ಲೇಖಕ ಅನಂತ ರಾಜೇಗೌಡ ಅವರ ನಿಧನಕ್ಕೆ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-112397922

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.