ಕುಶಾಲನಗರ: ‘ರಾಜ್ಯದಲ್ಲಿ ಅಧಿಕಾರಕ್ಕಾಗಿ ಕುರ್ಚಿ ಕಿತ್ತಾಟದಲ್ಲಿ ಕಾಂಗ್ರೆಸ್ ನಾಯಕರು ನಿರತರಾಗಿದ್ದಾರೆ. ಜನರ ಜ್ವಲಂತ ಸಮಸ್ಯೆಗಳನ್ನು ಸರ್ಕಾರ ಮರೆತಿದೆ. ಈ ಸರ್ಕಾರಕ್ಕೆ ಪರ್ಯಾಯವಾಗಿ ಜನ ಸೇವೆಗೆ ಬಿಜೆಪಿ ಅನಿವಾರ್ಯವಾಗಿದೆ’ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಪಾದಿಸಿದರು.

ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕತ್ತೂರಿನ ಕೂರ್ಗ್ ನೇಚರ್ ಬ್ಲಿಫ್ ರೆಸಾರ್ಟ್ ಸಭಾಂಗಣದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026ರ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಬಿಜೆಪಿ ಕಾರ್ಯಕರ್ತರು, ನಾವೆಲ್ಲರೂ ಶ್ರಮವಹಿಸಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಕಾರ್ಯನಿರ್ವಹಿಸೋಣ. ಜಿಲ್ಲೆಯಲ್ಲಿ ಮತ್ತೆ ಬಿಜೆಪಿ ವೈಭವ ಮರುಕಳಿಸುವಂತಾಗಬೇಕು’ ಎಂದರು

‘ಬಿಜೆಪಿಗೆ ಅಧಿಕಾರ ಗಳಿಸುವುದೇ ಮುಖ್ಯ ಉದ್ದೇಶವಲ್ಲ. ಉತ್ತಮ ಸೇವೆ ಸಲ್ಲಿಸಲು ಅಧಿಕಾರ ಎಂಬುದು ಒಂದು ಸಾಧನವಷ್ಟೆ’ ಎಂದೂ ಅವರು ಹೇಳಿದರು.

‘ಜಿಲ್ಲಾಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದವರೆಗೆ ಪ್ರತಿ ಹಂತದಲ್ಲಿ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ನಡೆಯಲಿದೆ. ಕಾರ್ಯಕರ್ತರ ವ್ಯಕ್ತಿತ್ವ ರೂಪಿಸಲು, ಶಿಸ್ತು ಮೂಡಿಸಲು ಜವಾಬ್ದಾರಿಯುತ ಸ್ಥಾನದಲ್ಲಿರುವವರ ಮೂಲಕ ಸಹಕಾರಿಯಾಗಲಿದೆ. ನಿರ್ದಿಷ್ಟ ಗುರಿ ಹೊಂದಿರುವ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ’ ಎಂದರು.

‘ಪಕ್ಷದ ಮೂಲ ತತ್ವ, ಸಿದ್ಧಾಂತ, ಪರಂಪರೆಯನ್ನು ಇಂದಿನ ಆಧುನಿಕ ಕಾಲಘಟ್ಟದ ಕಾರ್ಯಕರ್ತರಿಗೆ ಸ್ಮರಿಸಿ ಪಕ್ಷದೊಳಗೆ ಯಾವ ರೀತಿ ಕಾರ್ಯನಿರ್ವಹಿಸಬೇಕು, ಜನರಿಗೆ ಹೇಗೆ ಸೇವೆ ಸಲ್ಲಿಸಬೇಕು ಎಂಬುದನ್ನು ತಿಳಿಸಲು ಈ ಕಾರ್ಯಕ್ರಮದಿಂದ ಸಾಧ್ಯ. ಶಿಬಿರಗಳು ಯಶಸ್ವಿಯಾದರೆ, ಮುಂಬರುವ ಚುನಾವಣೆಗಳಲ್ಲಿ ಪಕ್ಷವು ಜಿಲ್ಲೆಯೂ ಸೇರಿದಂತೆ ಎಲ್ಲಡೆ ಉತ್ತಮ ಫಲಿತಾಂಶ ಪಡೆಯಬಹುದು’ ಎಂದರು.

ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಯಕ್ರಮದ ರೂಪುರೇಷೆ ಕುರಿತು ವಿವರಿಸಿದರು.

ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ, ಕೊಡಗು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರಿ ಬಿ.ಬಿ.ಭಾರತೀಶ್, ಕಾರ್ಯಕ್ರಮ ಸಂಯೋಜಕ ಮನು ಮುತ್ತಪ್ಪ, ಮೈಸೂರು ವಿಭಾಗದ ಸಂಯೋಜಕ ರಾಜೇಶ್, ಜಿಲ್ಲಾ ಉಪಾಧ್ಯಕ್ಷ ವಿ.ಕೆ.ಲೋಕೇಶ್, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಶಿಬಿರದ ಜಿಲ್ಲಾ ಸಂಚಾಲಕಿ ರೂಪಾ ಸತೀಶ್, ಮಹಿಳಾ ಮೋರ್ಚಾ ಅಧ್ಯಕ್ಷ ಅನಿತಾ ಪೂವಯ್ಯ, ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರಿ ಬಿ.ಬಿ.ಭಾರತೀಶ್, ಜಿಲ್ಲಾ ಸಮಿತಿಯ ನೆಲ್ಲಿರ ಚಲನ್, ಅರುಣ್ ಕುಮಾರ್ ಬಿ.ಕೆ., ಲೋಕೇಶ್ವರಿ ಗೋಪಾಲ್, ಮೈಸೂರಿನ ಫನೀಶ್, ರಾಜೇಶ್, ಸ್ವಾಮಿ, ಫಣೀಶ್, ಕಾರ್ಯಾಗಾರದ ಪ್ರಬಂಧಕರಾದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ರಕ್ಷಿತ್ ಮಾವಜಿ, ಸುಮನ್ ಗೌಡ, ಪ್ರವೀಣ್ ಮಲ್ಲಜಿರ, ನವನೀತ್ ಪೊನ್ನೆಟ್ಟಿ, ರಾಮನಾಥನ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-51-1595277441

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.