ಕುಶಾಲನಗರ(ಕೊಡಗು ಜಿಲ್ಲೆ): ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯವಾಗಿ ಮಗುವನ್ನು ಕಳೆದುಕೊಂಡ ದುಃಖದಲ್ಲೂ ಪೋಷಕರು ಆ ಮಗುವಿನ ಕಿಡ್ನಿ ಹಾಗೂ ಕಣ್ಣುಗಳನ್ನು ದಾನ ಮಾಡಿದ್ದಾರೆ.

ಚಿಕ್ಕಅಳುವಾರ ಗ್ರಾಮದ ರಜಿತ್– ರಮ್ಯಾ ದಂಪತಿಯ ಪುತ್ರ ಅನ್ವಿಕ್ (4 ವರ್ಷ) ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೃತಪಟ್ಟಿದ್ದ. ಈತ ಯಡವನಾಡು ಗ್ರಾಮದಲ್ಲಿ ತಾತ ಹರಗ ತಿಮ್ಮಯ್ಯ ಮತ್ತು ಅಜ್ಜಿಯೊಂದಿಗೆ ವಾಸವಿದ್ದ.

ಸೋಮವಾರ ಅಜ್ಜಿಯೊಂದಿಗೆ ಸೋಮವಾರಪೇಟೆಗೆ ಹೋಗಿ ವಾಪಸ್ ಬಸ್ನಲ್ಲಿ ಬಂದು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿತ್ತು. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ನಾಲ್ಕು ದಿನಗಳಿಂದ ಆತನಿಗೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಬಾಲಕ ಗುರುವಾರ ರಾತ್ರಿ ಮೃತಪಟ್ಟಿದ್ದ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-51-1012825236

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.