ಸೋಮವಾರಪೇಟೆ: ಕಾರ್ಮಿಕ ಇಲಾಖೆಯಿಂದ ಕೊಡಗು ಜಿಲ್ಲೆಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗಾಗಿ ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ತರಬೇತಿ ಕಾರ್ಯಾಗಾರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಈಚೆಗೆ ನಡೆಯಿತು.

ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಸ್. ಶಶಿಧರ್ ಅವರು ಮಾತನಾಡಿ, ನೈಜ ಅರ್ಹ ಕಟ್ಟಡ ಕಾರ್ಮಿಕರು ಕಡ್ಡಾಯವಾಗಿ ನೋಂದಣಿ ಮಾಡಿಕೊಂಡು ಮಂಡಳಿಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಕೆಲಸದ ಸ್ಥಳಗಳಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸುರಕ್ಷತಾ ನಿಯಮಗಳ ಬಗ್ಗೆ ತರಬೇತುದಾರರಾದ ಕಾರ್ತಿಕ್, ದರ್ಶನ್ ಮತ್ತು ಪ್ರದೀಪ್ ಅವರು ಮಾಹಿತಿ ನೀಡಿದರು.

ಇದರೊಂದಿಗೆ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ನಡೆಸಿ, ಕಾರ್ಮಿಕರಿಗೆ ಸುರಕ್ಷತಾ ಕಿಟ್ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿಯ ಹಿರಿಯ ಅಧಿಕಾರಿ ಪ್ರಸನ್ನ, ಕಚೇರಿ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-51-1499034429

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.