ಸೋಮವಾರಪೇಟೆ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಮೇ 4ರಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸಿಆರ್ಪಿಎಫ್ ಯೋಧ ಕೆ.ಜೆ. ನವೀನ್ ಅವರ ಅಂತ್ಯಕ್ರಿಯೆ ಬುಧವಾರ ಸ್ವಗ್ರಾಮ ಯಡವಾರೆಯಲ್ಲಿ ನಡೆಯಿತು.

ಮಂಗಳವಾರ ರಾತ್ರಿ 1.30ರ ಸುಮಾರಿಗೆ ಮೃತ ನವೀನ್ ಅವರ ಪಾರ್ಥಿವ ಶರೀರರವನ್ನು ಯಡವಾರೆ ಗ್ರಾಮಕ್ಕೆ ತರಲಾಯಿತು.

180ನೇ ಬೆಟಾಲಿಯನ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿರಿಯಾಪಟ್ಟಣದ ಯೋಧ ಬಸವರಾಜ್ ಅವರು ಪಾರ್ಥಿವ ಶರೀರದೊಂದಿಗೆ ಶ್ರೀನಗರದಿಂದ ಆಗಮಿಸಿದ್ದರು. ಬೆಂಗಳೂರು ಯಲಹಂಕದಲ್ಲಿರುವ ಸಿಆರ್ಪಿಎಫ್ ಕಚೇರಿಯಿಂದ 6 ಮಂದಿ ಯೋಧರು ಆಗಮಿಸಿದ್ದರು. ಬೆಳಿಗ್ಗೆ ಮನೆಯ ಮುಂಭಾಗ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಕುಟುಂಬಸ್ಥರ ಸಹಿತ ನೂರಾರು ಮಂದಿ ಸಾರ್ವಜನಿಕರು ಆಗಮಿಸಿ ಅಂತಿಮ ದರ್ಶನ ಪಡೆದರು.

ನಂತರ ಜಿಲ್ಲಾ ಸಶಸ್ತ್ರ ಪಡೆಯಿಂದ ಗೌರವ ವಂದನೆ ನಡೆಯಿತು. ಸಿ.ಆರ್.ಪಿ.ಎಫ್.ನ ಅಸಿಸ್ಟೆಂಟ್ ಕಮಾಂಡರ್ ಯೋಗೇಂದ್ರ ಸೈನ್ ಅವರು ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದರು. ಸಿಆರ್ಪಿಎಫ್ ಯೋಧ ಬಸವರಾಜು ಅವರು ರಾಷ್ಟ್ರಧ್ವಜವನ್ನು ಮೃತ ನವೀನ್ ಅವರ ಪತ್ನಿ ಸುನೀತಾ ಹಾಗೂ ಮಕ್ಕಳಿಗೆ ಹಸ್ತಾಂತರಿಸಿದರು. ಮೂರು ಸುತ್ತು ಕುಶಾಲತೋಪು ಸಿಡಿಸಿದ ನಂತರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ಶಾಸಕ ಡಾ. ಮಂತರ್ ಗೌಡ, ತಾಲ್ಲೂಕು ಆಡಳಿತದ ಪರವಾಗಿ ತಹಶೀಲ್ದಾರ್ ಕೃಷ್ಣಮೂರ್ತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪೂರ್ಣಕುಮಾರ್, ಸಿಆರ್ಪಿಎಫ್ನ ಮಾಜಿ ಯೋಧರ ಒಕ್ಕೂಟದ ಪದಾಧಿಕಾರಿಗಳು ಗೌರವ ನಮನ ಸಲ್ಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-51-390364948

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.