ಈ ವೇಳೆ ಮಾತನಾಡಿದ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ, ‘ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು, ಕೊಡವ ಜನಾಂಗೀಯ ಬುಡಕಟ್ಟು ಜನಾಂಗಕ್ಕೆ ಎಸ್‍ಟಿ ಟ್ಯಾಗ್ ಕಲ್ಪಿಸಬೇಕು, ಕೊಡವ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆಯ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ ಸಾಂವಿಧಾನಿಕ ಭದ್ರತೆ ಒದಗಿಸಬೇಕು, ದೇವಟ್ ಪರಂಬುವಿನಲ್ಲಿ ನಡೆದ ನರಮೇಧದ ಸ್ಮರಣಾರ್ಥ ಅಂತರರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು ಹಾಗೂ ಕೊಡವ ನರಮೇಧವನ್ನು ಯುಎನ್‍ಒ ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು’ ಎಂದು ಒತ್ತಾಯಿಸಿದರು.
ಮುಖಂಡರಾದ ಕಲಿಯಂಡ ಪ್ರಕಾಶ್, ಪಟ್ಟಮಾಡ ಕುಶ, ಅರೆಯಡ ಗಿರೀಶ್, ಮಂದಪಂಡ ಮನೋಜ್, ಕಾಟುಮಣಿಯಂಡ ಇದ್ದರು.