ಮಡಿಕೇರಿ: ವರ್ಷಗಳಿಂದ ತೆವಳುತ್ತಲೇ ಸಾಗುತ್ತಿರುವ ಕೊಡವ ಪಾರಂಪರಿಕ ಕೇಂದ್ರ(ಕೊಡವ ಹೆರಿಟೇಜ್ ಸೆಂಟರ್) ಹಾಗೂ ಕರ್ನಾಟಕ ಸುವರ್ಣ ಸಮುಚ್ಛಯ ಭವನ ಕಟ್ಟಡ ಕಾಮಗಾರಿಯನ್ನು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಂಗಳವಾರ ಪರಿಶೀಲಿಸಿದರು.

ಈ ಎರಡೂ ಸ್ಥಳಗಳಿಗೆ ಭೇಟಿ ನೀಡಿದ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಾಮಗಾರಿ ತಡವಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು ಎರಡೂ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಅದರಲ್ಲೂ ಕರ್ನಾಟಕ ಸುವರ್ಣ ಸಮುಚ್ಛಯ ಭವನದ ಕಾಮಗಾರಿ ಬಹಳ ಹಿಂದೆಯೇ ಪೂರ್ಣಗೊಳ್ಳಬೇಕಿತ್ತು, ಆದರೆ, ಈಗಲಾದರೂ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ನಿರ್ದೇಶನ ನೀಡಿದರು.

ಕೊಡವ ಪಾರಂಪರಿಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು ಯಾವುದೇ ಕಾಮಗಾರಿ ಇರಲಿ ಅದು ಕಟ್ಟಡದ ಒಳಾಂಗಣ ಹಾಗೂ ಹೊರಾಂಗಣ ಅಭಿವೃದ್ಧಿ ಸೇರಿದಂತೆ ಎಲ್ಲವನ್ನೂ ಒಂದೇ ಬಾರಿ ಅಂದಾಜು ಪಟ್ಟಿ ಸಲ್ಲಿಸಿ ಹಣ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಸೂಚಿಸಿದರು.

‘ಐನ್ಮನೆ’ ಮಾದರಿಯಲ್ಲಿ ಕೊಡವ ಹೆರಿಟೇಜ್ ಸೆಂಟರ್ ಅನ್ನು ನಿರ್ಮಿಸಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಐನ್ಮನೆಯು ಪೂಜ್ಯ ಸ್ಥಾನವನ್ನು ಹೊಂದಿದೆ. ಕೊಡವ ಸಂಸ್ಕೃತಿ ಮತ್ತು ಪರಂಪರೆಯ ಚಟುವಟಿಕೆಗಳನ್ನು ನಡೆಸಲು ಕೊಡವ ಹೆರಿಟೇಜ್ ಸೆಂಟರ್ ಸಹಕಾರಿಯಾಗಿದೆ’ ಎಂದು ಕಾರ್ಯಪಾಲಕ ಎಂಜಿನಿಯರ್ ಕೆ.ಟಿ.ಪ್ರಭು ಮಾಹಿತಿ ನೀಡಿದರು.

ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿಯಲ್ಲಿ ಮ್ಯೂಸಿಯಂ ಸಹ ಇದೆ. ಮೊದಲ ಹಂತದಲ್ಲಿ ₹ 3 ಕೋಟಿ ಬಿಡುಗಡೆಯಾಗಿತ್ತು. ಈಗ ₹ 4.95 ಕೋಟಿ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ ತಿಳಿಸಿದರು.

ಬಳಿಕ, ಕರ್ನಾಟಕ ಸುವರ್ಣ ಸಮುಚ್ಛಯ ಭವನ ವೀಕ್ಷಿಸಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಬಾಕಿ ಇರುವ ₹ 1.40 ಕೋಟಿ ಬಿಡುಗಡೆಯಾಗಲಿದ್ದು, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗಳಿಗೆ ಸೂಚಿಸಿದರು.

ಕರ್ನಾಟಕ ಸುವರ್ಣ ಸಮುಚ್ಛಯ ಭವನದಲ್ಲಿ ಕಲಾಮಂದಿರ, ಕಲಾ ಗ್ಯಾಲರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಅರೆಭಾಷೆ ಸಾಹಿತ್ಯ ಅಕಾಡೆಮಿ ಕಚೇರಿಗಳು ಕರ್ನಾಟಕ ಸುವರ್ಣ ಸಮುಚ್ಛಯ ಭವನಕ್ಕೆ ಸ್ಥಳಾಂತರವಾಗಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಮಾಹಿತಿ ನೀಡಿದರು.

ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್, ಸತೀಶ, ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕರಾದ ಜತಿನ್ ಭಾಗವಹಿಸಿದ್ದರು.

ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಬರಬೇಕಿರುವ ₹ 1.40 ಕೋಟಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ಒಳಾಂಗಣ, ಹೊರಂಗಾಣ ಕಾಮಗಾರಿಗಳಿಗೆ ಒಟ್ಟಿಗೆ ಪ್ರಸ್ತಾವ ಸಲ್ಲಿಸಲು ಸಲಹೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.