ಮಂಗಳವಾರ, ಫೆಬ್ರವರಿ 18, 2020
29 °C
ಕಂದಾಯ ಸಚಿವ ಆರ್‌.ಅಶೋಕ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ

ಅನಧಿಕೃತ ಮನೆಗಳಿಗೂ ಬಾಡಿಗೆ ಹಣ ಪಾವತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿದ್ದ ‘ಎ’ ಮತ್ತು ‘ಬಿ’ ವೃಂದದ ಪಟ್ಟಿಯಲ್ಲಿರುವ ಮನೆಗಳ ಮಾಲೀಕರಿಗೂ ಬಾಡಿಗೆ ಹಣ ಪಾವತಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

2019–20ನೇ ಸಾಲಿನಲ್ಲಿ ಕೊಡಗಿನಲ್ಲಿ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಅಧಿಕೃತವಾದ ಮನೆಗಳಿಗೆ ಬಾಡಿಗೆ ಮೊತ್ತ ಪಾವತಿಸಲಾಗಿದೆ. ಅದೇ ರೀತಿ ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿದ್ದ ‘ಎ’ ಮತ್ತು ‘ಬಿ’ ವೃಂದದ ಪಟ್ಟಿಯಲ್ಲಿರುವ ಮನೆಗಳಿಗೆ ಬಾಡಿಗೆ ಹಣವನ್ನು ಪಾವತಿಸುವ ಸಂಬಂಧ ಫೆ.10ರಂದು ಬೆಂಗಳೂರಿನಲ್ಲಿ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎದು ಅವರು ಮಾಹಿತಿ ನೀಡಿದ್ದಾರೆ.

ಕೊಡಗು ಜಿಲ್ಲೆಗೆ ವಿಶೇಷ ಆದ್ಯತೆ ನೀಡಿ ತಿಂಗಳಿಗೆ ₹5 ಸಾವಿರದಂತೆ ಗರಿಷ್ಠ 10 ತಿಂಗಳಿಗೆ ₹50 ಸಾವಿರ ಬಾಡಿಗೆ ಹಣ ಪಾವತಿಸಲು ತೀರ್ಮಾನಿಸಲಾಗಿದೆ. ಅದರಂತೆ ಜಿಲ್ಲೆಯಲ್ಲಿ 2019–20ನೇ ಸಾಲಿನಲ್ಲಿ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡಿದ್ದ ಒಟ್ಟು 228 ‘ಎ’ ಮತ್ತು ‘ಬಿ’ ವೃಂದದ ಮನೆಗಳ ಮಾಲೀಕರಿಗೆ ಮೊದಲನೇ ಹಂತದಲ್ಲಿ ಒಟ್ಟು 5 ತಿಂಗಳ ಬಾಡಿಗೆ ಹಣವಾಗಿ ತಲಾ ₹25 ಸಾವಿರದಂತೆ ಒಟ್ಟು ₹57 ಲಕ್ಷವನ್ನು ಅವರವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವತಿಯಿಂದ ಪಾವತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಉಳಿದ ಐದು ತಿಂಗಳ ಬಾಡಿಗೆ ಹಣವನ್ನು ಮುಂದಿನ ದಿನಗಳಲ್ಲಿ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪಾವತಿಸಲಾಗುವುದು. ಹಾನಿಗೊಳಗಾದ ಅನಧಿಕೃತ ಮನೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಆ ಪ್ರಕ್ರಿಯೆ ಜಾರಿಯಲ್ಲಿದೆ. ಸಂಬಂಧಪಟ್ಟ ಫಲಾನುಭವಿಗಳು ಅವರವರ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿಕೊಳ್ಳಲು ಜಿಲ್ಲಾಧಿಕಾರಿ ಕೋರಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು