ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ನಿರಂತರ ಮಳೆ: ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಸ್ಲ್ಯಾಬ್ ಹೊರಕ್ಕೆ

Last Updated 8 ಜುಲೈ 2022, 12:46 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲಾಧಿಕಾರಿ ಕಚೇರಿಯ ತಡೆಗೋಡೆಯ ಕಾಂಕ್ರೀಟ್ ಸ್ಲ್ಯಾಬ್ ಗಳು ಮಳೆಯಿಂದ ಹೊರಚಾಚಿದ್ದು, ಆತಂಕ ಸೃಷ್ಟಿಸಿದೆ.
ಮಡಿಕೇರಿ- ಮಂಗಳೂರು ರಸ್ತೆಯಲ್ಲಿರುವ ತಡೆಗೋಡೆಯನ್ನು ಸಂಸದ ಪ್ರತಾಪಸಿಂಹ ಶುಕ್ರವಾರ ಪರಿಶೀಲನೆ ನಡೆಸಿದರು.

ಇದಕ್ಕೂ ಮುನ್ನ ನಡೆದ ಜಿಲ್ಲಾ ಅಭಿವೃದ್ಧಿ ಮತ್ತು ಸಮನ್ವಯ ಸಮಿತಿ ಸಭೆಯಲ್ಲಿ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಅಪ್ಪಚ್ಚುರಂಜನ್ ಈ ತಡೆಗೋಡೆಯ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿದರು.

ಒಟ್ಟು ಮೂರು ಹಂತದ ಕಬ್ಬಿಣ ಅಳವಡಿಸಲಾಗಿದ್ದು, ತಡೆಗೋಡೆ ಕುಸಿಯುವ ಸಾಧ್ಯತೆ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ನೀಡಿದರು. ಅತಿ ಶೀಘ್ರದಲ್ಲಿ ತಜ್ಞರಿಂದ ತಪಾಸಣೆ ನಡೆಸಿ ಎಂದು ಪ್ರತಾಪಸಿಂಹ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT