ಮಡಿಕೇರಿ: ವಿಪತ್ತು ನಿರ್ವಹಣೆಯಲ್ಲಿ ಯುವಕರ ಪಾತ್ರ ಮಹತ್ವದ್ದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಷ್ಟ್ರೀಯ ಸ್ವಯಂಸೇವಾ ಯೋಜನೆಯ ರಾಜ್ಯ ಅಧಿಕಾರಿ ಡಾ.ಪ್ರತಾಪ್ ಲಿಂಗಯ್ಯ ಹೇಳಿದರು.

ಇಲ್ಲಿನ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆಯುತ್ತಿರುವ ‘ಯುವ ಆಪದಾ ಮಿತ್ರ’ ತರಬೇತಿ ಶಿಬಿರದಲ್ಲಿ ಅವರು ಭಾನುವಾರ ಮಾತನಾಡಿದರು. ನಂತರ, ಅವರು ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಕಿಟ್ ವಿತರಿಸಿದರು.

ಯೆನೆಪೋಯ ವೈದ್ಯಕೀಯ ಕಾಲೇಜಿನ ಡಾ.ಅಶ್ವಿನಿ ಶೆಟ್ಟಿ ಅವರು ಪ್ರಥಮ ಚಿಕಿತ್ಸೆ ಹಾಗೂ ಹಾವು ಕಚ್ಚಿದಾಗ ಕೈಗೊಳ್ಳಬೇಕಾದ ಕ್ರಮಗಳನ್ನು ಕುರಿತು ಮಾತನಾಡಿದರು. ತರಬೇತಿ ಶಿಬಿರದ ಆಯೋಜಕ ಡಾ.ರಾಮಚಂದ್ರ ಕಾಮತ್ ಮಾತನಾಡಿ, ‘ಈ ಶಿಬಿರ ಆಯೋಜಿಸಲು ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ಎ.ಜೆ.ಲೋಕೇಶ್ ಅವರು ಸಹಕಾರ ನೀಡಿದ್ದಾರೆ’ ಎಂದರು.

ವಿವಿಧ ಕಾಲೇಜುಗಳ ರಾಷ್ಟ್ರೀಯ ಸ್ವಯಂಸೇವಾ ಯೋಜನೆಯ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260317-51-423775655

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.