ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತತ ಮಳೆ: ಕೊಡಗು ಜಿಲ್ಲಾಧಿಕಾರಿ ಕಚೇರಿ ಕುಸಿಯುವ ಭೀತಿ, ಸಂಚಾರಕ್ಕೆ ಬದಲಿ ಮಾರ್ಗ

Last Updated 17 ಜುಲೈ 2022, 7:21 IST
ಅಕ್ಷರ ಗಾತ್ರ

ಮಡಿಕೇರಿ: ಇಲ್ಲಿನ ಮಡಿಕೇರಿ- ಮಂಗಳೂರು ರಸ್ತೆಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ತಡೆಗೋಡೆಯ ಸ್ಲ್ಯಾಬ್‌ಗಳು ಹೊರಚಾಚಿದ್ದು, ಕಳಚಿ ಬೀಳುವ ಆತಂಕ ಮೂಡಿದೆ. ಹೀಗಾಗಿ, ವಾಹನ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದೆ‌.

ಮಡಿಕೇರಿಯಿಂದ ಮಂಗಳೂರಿಗೆ ಹೋಗುವವರು ಹಾಗೂ ಬರುವವರು ಮೇಕೇರಿ- ಅಪ್ಪಂಗಳ- ತಾಳತ್ತಮನೆ ಜಂಕ್ಷನ್ ಮಾರ್ಗದಲ್ಲಿ ಸಂಚರಿಸಬೇಕಿದೆ.

ಕಳೆದ ಒಂದು ವಾರದಿಂದಲೂ ಸ್ಲ್ಯಾಬ್‌ಗಳು ಹೊರಚಾಚಿದ್ದವು. ತಡೆಗೋಡೆ ಕುಸಿದು ಬೀಳುವುದಿಲ್ಲ ಒಳಗೆ ನೀರು ಸೇರಿರುವುದರಿಂದ ಸ್ಲ್ಯಬ್ ಗಳು ಹೊರಚಾಚಿವೆ ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಪ್ರತಿಪಾದಿಸಿದ್ದರು.

ಸಚಿವ ಆರ್.ಅಶೋಕ್, ಸಂಸದ ಪ್ರತಾಪಸಿಂಹ, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್ ಪರಿಶೀಲನೆ ನಡೆಸಿ, ತಜ್ಞರಿಂದ ಪರಿಶೀಲನೆ ನಡೆಸಿ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸೂಚಿಸಿದ್ದರು.

ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಡೆಗೋಡೆಗೆ ಪೈಪ್ ತೂರಿಸಿ ಮೋಟಾರ್ ಬಳಸಿ ನೀರನ್ನು ಹೊರತೆಗೆಯುವ ಪ್ರಯತ್ನವನ್ನೂ ನಡೆಸಿದ್ದರು. ಆದರೆ, ಸ್ಲ್ಯಾಬ್ ಗಳ ಹೊರಚಾಚುವಿಕೆ ಮುಂದುವರಿದಿರುವುದು ಆತಂಕಕ್ಕೆ ಕಾರಣವಾಗಿದೆ‌.


ಮಡಿಕೇರಿ - ಮೇಕೇರಿ ರಸ್ತೆಯಲ್ಲಿ ವಾಹನ ದಟ್ಟಣೆ; ಪ್ರಯಾಣಿಕರ ಪರದಾಟ
ಮಡಿಕೇರಿ:
ಇಲ್ಲಿನ ಕೊಡಗು ಜಿಲ್ಲಾಧಿಕಾರಿ ಕಚೇರಿಯ ತಡೆಗೋಡೆ ಕುಸಿತದ ಭೀತಿಯಿಂದ ಮಂಗಳೂರು ರಸ್ತೆಯಲ್ಲಿ ಸಂಚಾರ ನಿಷೇಧಿಸಿ ಮೇಕೇರಿ-ಅಪ್ಪಂಗಲ- ತಾಳತ್ತಮನೆ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ಆದರೆ, ಇಲ್ಲಿ ರಸ್ತೆ ಚಿಕ್ಕದಾಗಿರುವುದರಿಂದ ವಾಹನದಟ್ಟಣೆ ಉಂಟಾಗಿದೆ. ಕಿ.ಮೀ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಇದರಿಂದ ಮಂಗಳೂರಿಗೆ ಹೋಗುವ ಪ್ರಯಾಣಿಕರು ಪರದಾಡುವಂತಾಗಿದೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT