ಮಡಿಕೇರಿ: ಶಾಲಾ-ಕಾಲೇಜುಗಳಲ್ಲಿ ‘ಮಾದಕವಸ್ತು ಮುಕ್ತ ಕ್ಯಾಂಪಸ್’ ನಿರ್ಮಿಸಬೇಕು ಹಾಗೂ ಮಾದಕ ವ್ಯಸನಿಗಳನ್ನು ವ್ಯಸನ ಮುಕ್ತರಾಗಿಸಲು ಪುನರ್ವಸತಿ ಕೇಂದ್ರ ತೆರೆಯಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಕೇಂದ್ರ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಈ ಕುರಿತು ನಿರ್ದೇಶನ ನೀಡಿದರು.

ಸಭೆಯಲ್ಲಿ ಏಪ್ರಿಲ್ ತಿಂಗಳಿನಲ್ಲಿ ನಡೆದ ಜಿಲ್ಲಾಮಟ್ಟದ ಮಾದಕ ದ್ರವ್ಯ ಸಮನ್ವಯ ಕೇಂದ್ರ ಸಭೆಯ ನಡಾವಳಿಯ ಅಂಶಗಳಲ್ಲಿ ಚರ್ಚಿಸಿದ ವಿಷಯಗಳ ಬಗ್ಗೆ ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ವಿವರವಾಗಿ ಚರ್ಚಿಸಿದರು.

ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ‘ಮಾದಕವಸ್ತು ಮುಕ್ತ ಕ್ಯಾಂಪಸ್’ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಎಲ್ಲಾ ಜಿಲ್ಲೆಗಳಲ್ಲಿ ಪುನರ್ವಸತಿ ಕೇಂದ್ರಗಳಿವೆ. ಜಿಲ್ಲೆಯಲ್ಲೂ ಅಗತ್ಯ ಇರುವುದರಿಂದ ಅನುದಾನ ನೀಡಲಾಗುವುದು. ಕೇಂದ್ರ ಸ್ಥಾಪನೆಗೆ ಶೀಘ್ರ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು. ಇದೇ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಸಹ ಪುನರ್ವಸತಿ ಕೇಂದ್ರದ ಅಗತ್ಯತೆ ಕುರಿತು ಮಾತನಾಡಿದರು.

ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ‘ಜಿಲ್ಲೆಯಲ್ಲಿ ಖಾಸಗಿ ಅಥವಾ ಸರ್ಕಾರಿ ಪುನರ್ವಸತಿ ಕೇಂದ್ರವನ್ನು ಸರ್ಕಾರಿ ಕಟ್ಟಡ ದೊರೆತಲ್ಲಿ ಪುನರ್ವಸತಿ ಕೇಂದ್ರ ತೆರೆಯಬಹುದು’ ಎಂದರು.

ಮಾದಕ ವಸ್ತುಗಳ ಸೇವನೆಗೆ ಒಳಪಟ್ಟ ವ್ಯಕ್ತಿಗಳನ್ನು ದುಶ್ಚಟದಿಂದ ವಿಮುಕ್ತಿಗೊಳಿಸುವ ಉದ್ದೇಶದಿಂದ ಜಿಲ್ಲಾಸ್ಪತ್ರೆಯಲ್ಲಿ ತಾತ್ಕಾಲಿಕ ಸ್ಥಾಪಿತಗೊಂಡಿರುವ ವ್ಯಸನಮುಕ್ತ ಕೇಂದ್ರಕ್ಕೆ ನಿಯೋಜಿತ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿವರವನ್ನು ಪೊಲೀಸ್ ಇಲಾಖೆಗೆ ಸಲ್ಲಿಸಲಾಗಿದೆ. ಪೊಲೀಸ್ ಇಲಾಖೆಯಿಂದ ಈಗಾಗಲೇ ಗುರುತಿಸಲಾಗಿರುವ ಮಾದಕ ವ್ಯಸನಿಗಳನ್ನು ವ್ಯಸನಮುಕ್ತ ಕೇಂದ್ರಕ್ಕೆ ಹಾಜರುಪಡಿಸಿ, ಅವರಿಗೆ ನಿಯಮಿತ ಸಮಾಲೋಚನೆ ಹಾಗೂ ಚಿಕಿತ್ಸೆ ನೀಡಲು ಅಗತ್ಯ ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದರು.

ಅಲ್ಲದೇ, ಆರೋಗ್ಯ ಇಲಾಖೆಯು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಈಗಾಗಲೇ ವಿತರಿಸುತ್ತಿರುವ ಮಾದಕದ್ರವ್ಯ ಪರೀಕ್ಷಾ ಕಿಟ್ಗಳು ಸಂಪೂರ್ಣವಾಗಿ ಬಳಕೆಯಾಗುತ್ತಿದ್ದು, ಕಾಲಕಾಲಕ್ಕೆ ಕಿಟ್ಗಳನ್ನು ಪೂರೈಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಿರುವುದಾಗಿಯೂ ಮಾಹಿತಿ ನೀಡಿದರು.

‘ಮಾದಕವಸ್ತು ಮುಕ್ತ ಕ್ಯಾಂಪಸ್’ ನಿರ್ಮಿಸುವ ಸಲುವಾಗಿ ಪೋಷಕರಿಂದ ಮುಚ್ಚಳಿಕೆ ಪತ್ರವನ್ನು ಪಡೆಯುವ ಪ್ರಕ್ರಿಯೆಯನ್ನು ಜಾರಿಗೆ ತರಲು ಸಂಬಂಧಪಟ್ಟ ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರಿಗೆ ಸೂಕ್ತ ಮಾರ್ಗದರ್ಶನ ನೀಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ವಿಶೇಷ ಉಪನ್ಯಾಸಗಳು, ಕಾರ್ಯಾಗಾರಗಳು ಹಾಗೂ ಸಂವಾದ ಕಾರ್ಯಕ್ರಮ ಆಯೋಜಿಸುವುದು. ಶಿಕ್ಷಕರಿಗೆ ಮಾದಕ ವ್ಯಸನ ಗುರುತಿಸುವಿಕೆ ಹಾಗೂ ವಿದ್ಯಾರ್ಥಿಗಳ ಮಾರ್ಗದರ್ಶನ ಕುರಿತು ತರಬೇತಿ ನೀಡಲಾಗುವುದು, ವಿದ್ಯಾರ್ಥಿಗಳ ಹಾಜರಾತಿ, ವರ್ತನೆ ಹಾಗೂ ಶೈಕ್ಷಣಿಕ ಪ್ರಗತಿಯ ಮೇಲೆ ನಿರಂತರ ಮೇಲ್ವಿಚಾರಣೆ ನಡೆಸಿ, ವ್ಯಸನದ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಿ ಡ್ರಗ್ ಟೆಸ್ಟ್ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಡಿಸಿಎಫ್ ಅಭಿಷೇಕ್, ಹೆಚ್ಚುವರಿ ಜಿಲ್ಲಾಧಿಕಾರಿ ಸಹಾನ ಎಸ್.ಹಾದಿಮನಿ, ಡಿಡಿಪಿಯು ಪಿ.ಅರ್.ವಿಜಯ, ಡಿಡಿಪಿಐ ಬಸವರಾಜು, ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಪಿ.ಎನ್.ಸೋಮಣ್ಣ, ಕಾರಾಗೃಹ ಅಧಿಕಾರಿ ಸಂಜಯ್ ಕುಮಾರ್, ಸಹಾಯಕ ಡ್ರಗ್ ನಿಯಂತ್ರಕ ಎಚ್.ಎಂ.ಹರೀಶ್, ಹಿರಿಯ ಪೊಲೀಸ್ ಅಧಿಕಾರಿ ಮೇದಪ್ಪ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-51-973120940

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.