ಮಡಿಕೇರಿ: ಗೋಣಿಕೊಪ್ಪಲು ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯು ಜೂನ್ 4ರಂದು ಬೆಳಿಗ್ಗೆ 11.30 ಗಂಟೆಯಿಂದ 12.30 ಗಂಟೆವರೆಗೆ ಗೋಣಿಕೊಪ್ಪ ಉಪವಿಭಾಗ ಕಚೇರಿ ಆವರಣದಲ್ಲಿ, ಮಧ್ಯಾಹ್ನ 2.30 ಗಂಟೆಯಿಂದ 3.30 ಗಂಟೆವರೆಗೆ ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ನಡೆಯಲಿದೆ.

ಜೂ.5 ರಂದು ಬೆಳಿಗ್ಗೆ 11.30ರಿಂದ 12.30 ಗಂಟೆವರೆಗೆ ಸೋಮವಾರಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಸೋಮವಾರಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸುವ ಸಭೆ, ಮಧ್ಯಾಹ್ನ 2.30ರಿಂದ 3.30 ಗಂಟೆವರೆಗೆ ಕುಶಾಲನಗರ ಉಪವಿಭಾಗ ಕಚೇರಿ ಆವರಣದಲ್ಲಿಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆ ನಡೆಯಲಿದೆ. ಜೂ.6 ರಂದು ಮಧ್ಯಾಹ್ನ 2.30 ಗಂಟೆಯಿಂದ 3.30 ಗಂಟೆವರೆಗೆ ಮಡಿಕೇರಿ ಉಪವಿಭಾಗ ಕಚೇರಿ ಆವರಣದಲ್ಲಿ ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆ ನಡೆಯಲಿದೆ. ಗೋಣಿಕೊಪ್ಪ, ವಿರಾಜಪೇಟೆ, ಸೋಮವಾರಪೇಟೆ, ಕುಶಾಲನಗರ, ಮಡಿಕೇರಿ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ದೂರುಗಳನ್ನು ಚರ್ಚಿಸಿ ಬಗೆಹರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-51-1264894437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.