ಸಿದ್ದಾಪುರ: ಕೆಲಸಕ್ಕೆ ತೆರಳುವ ವೇಳೆ ಕಾಡಾನೆ ಹಿಂಡು ಕಾರ್ಮಿಕರ ಮೇಲೆ ದಾಳಿಗೆ ಮುಂದಾದ ಘಟನೆ ನೆಲ್ಯಹುದಿಕೇರಿ ಅತ್ತಿಮಂಗಲದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.

ಅತ್ತಿಮಂಗಲ ಮುಖ್ಯ ರಸ್ತೆಯ ಬದಿಯಲ್ಲಿ ಸ್ಥಳೀಯ ಮಹಿಳಾ ಕಾರ್ಮಿಕರು ಕೆಲಸಕ್ಕೆ ತೆರಳುತ್ತಿದ್ದಾಗ ನಾಲ್ಕು ಕಾಡಾನೆಗಳು ಸಮೀಪದ ತೋಟದಿಂದ ರಸ್ತೆಗೆ ಬಂದಿದ್ದು, ಕಾರ್ಮಿಕರ ಮೇಲೆ ದಾಳಿಗೆ ಮುಂದಾಗಿವೆ. ಇದೇ ಸಂದರ್ಭ ಮುಖ್ಯ ರಸ್ತೆಯಲ್ಲಿ ಖಾಸಗಿ ಬಸ್ ಬಂದಿದ್ದು, ಕಾರ್ಮಿಕರ ಬಳಿ ನಿಲ್ಲಿಸಿದೆ. ಇದರಿಂದ ಕಾಡಾನೆಗಳು ಮರಳಿ ತೋಟಕ್ಕೆ ಹೋಗಿವೆ. ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅತ್ತಿಮಂಗಲ, ಅರೆಕಾಡು ಗ್ರಾಮದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಇತ್ತೀಚೆಗೆ ಕಾರಿನ ಮೇಲೆ ಆನೆ ದಾಳಿಗೆ ಮುಂದಾಗಿತ್ತು. ನಿರಂತರ ಕಾಡಾನೆ ಹಾವಳಿಯಿಂದ ಸ್ಥಳೀಯರು ಆತಂಕಕ್ಕೆ ಸಿಲುಕಿದ್ದು, ಕಾಡಾನೆಗಳನ್ನು ಕಾಡಿಗೆ ಅಟ್ಟಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-51-1771968798

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.