ವಿರಾಜಪೇಟೆ: ಜಿಲ್ಲೆಯಲ್ಲಿ ಹಲವು ದಶಕಗಳಿಂದ ನಡೆಯುತ್ತಿರುವ ಕಾಡಾನೆ- ಮಾನವ ಸಂಘರ್ಷವನ್ನು ನಿಯಂತ್ರಣಕ್ಕೆ ತರುವಲ್ಲಿ ಅರಣ್ಯ ಇಲಾಖೆ ಮತ್ತು ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಅವರು ಹೇಳಿದರು.

ಸಮೀಪದ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಂಗಾಲ ಗ್ರಾಮದ ದೇವರ ಕಾಡು ಬಳಿ ಅರಣ್ಯ ಇಲಾಖೆಯಿಂದ ಸುಮಾರು ₹21 ಲಕ್ಷ ವೆಚ್ಚದಲ್ಲಿ ಅಳವಡಿಸಿರುವ ಮೂರು ಕಿ.ಮೀ ಉದ್ದದ ಸೌರ ಬೇಲಿಗೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆ ಸೇರಿದಂತೆ ಪಶ್ಚಿಮ ಘಟ್ಟ ಹಾದುಹೋಗುವ ಹಾಸನ, ಚಿಕ್ಕಮಗಳೂರು, ತಮಿಳುನಾಡು ಹಾಗೂ ಕೇರಳದ ಬಹುತೇಕ ಪ್ರದೇಶಗಳಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ನಿರಂತರವಾಗಿವೆ. ಕಾಡಾನೆ ದಾಳಿ ತಡೆಗಟ್ಟುವುದು ಕಷ್ಟಸಾಧ್ಯವಾದರೂ ನಿಯಂತ್ರಿಸಲು ಇಲಾಖೆಯು ವೈಜ್ಞಾನಿಕವಾದ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಕೆಲಸ ಮಾಡುತ್ತಿದೆ. ಕಾಡಾನೆಗಳನ್ನು ನಿಯಂತ್ರಿಸಲು ಅರಣ್ಯ ಇಲಾಖೆಯು ವಿಶೇಷ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರವು ಕಾಡಾನೆಗಳ ದಾಳಿ ತಡೆಗಟ್ಟಲು ರಾಜ್ಯಕ್ಕೆ ವಿಶೇಷ ಅನುದಾನ ನೀಡಿದಲ್ಲಿ ಸೌರ ಬೇಲಿ, ಕಂದಕ ನಿರ್ಮಾಣ ಮತ್ತು ರೈಲ್ವೆ ಬ್ಯಾರಿಕ್ಯಾಡ್ ಅಳವಡಿಸಿ ಕಾಡಾನೆ ದಾಳಿಯನ್ನು ತಡಗಟ್ಟಬಹುದು. ಅರಣ್ಯ ಇಲಾಖೆಯು ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸುವುದರ ಮೂಲಕ ಸ್ಪಂದಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದರು.

ಅರಣ್ಯ ಉಪ ಸಂರಕ್ಷಣಾಧಿಕಾರಿ ಜಗನ್ನಾಥ್ ಮಾತನಾಡಿ, ಪಾಲಂಗಾಲ ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಇಲ್ಲಿನ ಗ್ರಾಮಸ್ಥರ ಬೇಡಿಕೆಯಂತೆ ಸೌರಬೇಲಿಯನ್ನು ಅಳವಡಿಸಲಾಗಿದೆ. ಮುಂದೆಯೂ ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ಇಲಾಖೆಯ ವತಿಯಿಂದ ಸೌರ ಬೇಲಿ ನಿರ್ಮಿಸಲಾಗುವುದು. ಬೇಲಿ ನಿರ್ಮಾಣ ಇಲಾಖೆಯ ಕರ್ತವ್ಯವಾದರೆ, ನಿರ್ವಹಣೆಯಲ್ಲಿ ಗ್ರಾಮಸ್ಥರ ಪಾತ್ರ ಮುಖ್ಯವಾಗಿದೆ ಎಂದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತಹಸೀನ್ ಬಾನು, ವಲಯ ಅರಣ್ಯ ಅಧಿಕಾರಿ ಶಿವರಾಮ್, ಶ್ರೀನಿವಾಸ್, ರಾಘವ, ಇಲಾಖೆಯ ಸಿಬ್ಬಂದಿ, ಕಾಂಗ್ರೆಸ್ ಪಕ್ಷದ ವಲಯ ಅಧ್ಯಕ್ಷ ನಡಿಕೇರಿಯಂಡ ಮಹೇಶ್, ಮಾಳೇಟಿರ ಪ್ರಶಾಂತ್ ಉತ್ತಪ್ಪ, ಜೆಫ್ರೀ ಉತ್ತಪ್ಪ, ಎಂ.ಎಂ. ಇಸ್ಮಾಯಿಲ್, ಕರಿನೆರವಂಡ ಜಾಲು ಚೆಂಗಪ್ಪ, ಮಿಟ್ಟು ಅಯ್ಯಪ್ಪ, ಸಂಕೇತ್ ಕಾಳಯ್ಯ, ಜೀತನ್, ಬಾಚಮಂಡ ಲವ ಚಿಣ್ಣಪ್ಪ ಮತ್ತು ಕಲಿಯಂಡ ಸಂಪನ್ ಸೇರಿದಂತೆ ಗ್ರಾಮಸ್ಥರ ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-51-1750112088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.