ಮಡಿಕೇರಿ: ‘ತೋಟಗಳಲ್ಲಿರುವ ಆನೆಗಳನ್ನು ಸೆರೆ ಹಿಡಿದು ಬಿಡಲು ‘ಸಾಫ್ಟ್ ರಿಲೀಸ್ ಸೆಂಟರ್’ ತೆರೆಯುವ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದರಿಂದ ರಾಜ್ಯಸರ್ಕಾರದ ಪರಿಧಿಯಲ್ಲೇ ಯೋಜನೆ ಜಾರಿಗೊಳಿಸಲು ಸಿದ್ಧತೆ ನಡೆಯುತ್ತಿದೆ. ಅದಕ್ಕೆ ಜಾಗವನ್ನೂ ಗುರುತಿಸಲಾಗಿದೆ. ವಿಸ್ತೃತ ಯೋಜನಾ ವರದಿ ತಯಾರಿಸಲಾಗುತ್ತಿದೆ’ ಎಂದು ಅರಣ್ಯ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.

‘ರಾಜ್ಯದಲ್ಲಿ 200–300 ಆನೆಗಳು ತೋಟಗಳಲ್ಲೇ ಇವೆ. ಅವುಗಳನ್ನು ‘ಸಾಫ್ಟ್ ರಿಲೀಸ್ ಸೆಂಟರ್’ಗೆ ಸ್ಥಳಾಂತರಿಸಲಾಗುವುದು’ ಎಂದು ಅವರು ಇಲ್ಲಿ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ನಂತರ ದುಬಾರೆ ತೂಗುಸೇತುವೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ‘ವನ್ಯಜೀವಿಗಳಿಂದ ಜೀವಹಾನಿಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಸಂಘರ್ಷ ತಗ್ಗಿಸಲು ತಜ್ಞರ ಸಲಹೆಗಳನ್ನು ಪಡೆಯಲಾಗುತ್ತಿದೆ. ಆಯ್ದ ಪ್ರದೇಶದಲ್ಲಿ, ಆಯ್ದ ವನ್ಯಜೀವಿಗಳ ಸಂತಾನ ನಿಯಂತ್ರಣದ ಸಲಹೆಗಳು ಬಂದಿದ್ದು, ಚರ್ಚೆ ನಡೆಯಬೇಕಾಗಿದೆ. ಯಾವುದೂ ಅಂತಿಮಗೊಂಡಿಲ್ಲ’ ಎಂದರು.

‘ಶೃಂಗೇರಿ ಕ್ಷೇತ್ರದಲ್ಲಿ ಮತಗಳನ್ನು ತಿದ್ದಲಾಗಿದೆ. ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಹಿಂದೆ ಮತಗಟ್ಟೆಯಲ್ಲಿದ್ದ ಬಿಜೆಪಿ ಏಜೆಂಟರ ಕಣ್ಣೆದುರೇ ಎಣಿಕೆಯಾಗಿದೆ. ಅವರ ಸಹಿಯೂ ಇದೆ. ಷಡ್ಯಂತ್ರದಿಂದ ಈಗ ಫಲಿತಾಂಶ ಬದಲಾಗಿದೆ’ ಎಂದು ದೂರಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-51-507047798

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.