ನಾಪೋಕ್ಲು: ಕೊಡಗು ಸಂಪದ್ಭರಿತವಾದ ಕೃಷಿ, ಪ್ರವಾಸೋದ್ಯಮ ಹೊಂದಿದ್ದು ಇದರಲ್ಲಿ ವಿಪುಲ ಅವಕಾಶ ಇರುವುದರಿಂದ ಮಕ್ಕಳು ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಜಿಲ್ಲೆ ಬಿಟ್ಟು ಹೋಗುವ ಅವಶ್ಯಕತೆ ಇಲ್ಲ ಎಂದು ಪೊನ್ನಂಪೇಟೆ ಅರಣ್ಯ ವಿದ್ಯಾಲಯದ ನಿವೃತ್ತ ಡೀನ್ ಚೆಪ್ಪುಡಿರ ಜಿ. ಕುಶಾಲಪ್ಪ ಹೇಳಿದರು.

ಇಲ್ಲಿಗೆ ಸಮೀಪದ ಮೂರ್ನಾಡಿನ ಮಾರುತಿ ವಿದ್ಯಾ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ತಂದೆಯ ಪಾತ್ರ ಮಹತ್ವದ್ದಾಗಿದೆ. ಮಕ್ಕಳು ತಾಯಿಯ ತ್ಯಾಗವನ್ನು ಅರಿತು ಮುನ್ನಡೆಯಬೇಕು ಎಂದರು.

ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಅದನ್ನು ಈಡೇರಿಸುವ ದಿಶೆಯಲ್ಲಿ ನಿರಂತರ ಕನಸು ಕಾಣುವಂತಾಗಬೇಕು.ಎಸ್ಎಸ್ಎಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪಿಯು ಹಂತದಲ್ಲಿ ತಮ್ಮ ಮುಂದಿನ ಗುರಿಗೆ ಅನುಗುಣವಾಗಿ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಅದಕ್ಕೆ ತಕ್ಕಂತೆ ಪ್ರಾಮಾಣಿಕ ಪ್ರಯತ್ನವೂ ಇರಬೇಕು. ಎಲ್ಲಾ ಕ್ಷೇತ್ರದಲ್ಲೂ ವಿಪುಲ ಅವಕಾಶವಿರುವುದರಿಂದ ಯಾರನ್ನು ಸಹ ಇಂದು ನಿರುದ್ಯೋಗಿ ಎನ್ನುವಂತಿಲ್ಲ ಎಂದು ಅಭಿಪ್ರಾಯಪಟ್ಟರು.

ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಮುಂಡಂಡ ಕೆ. ಅಪ್ಪಚ್ಚು ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಪ್ರಾಮಾಣಿಕತೆ, ಶ್ರದ್ಧೆ ಮತ್ತು ಮಾನವೀಯ ಮೌಲ್ಯಗಳನ್ನು ತಮ್ಮ ಬದುಕಿನುದ್ದಕ್ಕೂ ಅಳವಡಿಸಿಕೊಂಡು ದೇಶದ ಸತ್ಪ್ರಜೆಗಳಾಗಬೇಕು ಎಂದರು.

ಪ್ರಾಂಶುಪಾಲರಾದ ಸುಮಿತ ವಾರ್ಷಿಕ ವರದಿ ಮಂಡಿಸಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಚೇಂದ್ರಿಮಡ ಗಿಲ್ ಸೋಮಯ್ಯ, ಗೌರವ ಕಾರ್ಯದರ್ಶಿ ಬಡುವಂಡ ಅರುಣ್ ಅಪ್ಪಚ್ಚು, ನಿರ್ದೇಶಕರಾದ ಮುಂಡಂಡ ನೀಲವ್ವ ಮುತ್ತಣ್ಣ, ಬಡುವಂಡ ನೀಲಮ್ಮ ಮುತ್ತಪ್ಪ, ಚೇಂದ್ರಿಮಡ ರೂಪ ಸೋಮಯ್ಯ, ಉಪ ಪ್ರಾಂಶುಪಾಲರಾದ ಹೇಮಾವತಿ, ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ವಾರ್ಷಿಕೋತ್ಸವದ ಸಮಾರಂಭದಲ್ಲಿ ಪ್ರೀನರ್ಸರಿ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ ರಂಜಿಸಿತು. ಒಂದನೇ ತರಗತಿಯಿಂದ ಪಿಯುಸಿಯವರೆಗಿನ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರ ಮನಸೂರೆಗೊಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.