ಸೋಮವಾರಪೇಟೆ: ತಾಲ್ಲೂಕಿನ ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಪಾರೆಯಲ್ಲಿ ಕಳೆದ ಹಲವು ತಿಂಗಳಿನಿಂದ ರಸ್ತೆ ಹಾಗೂ ಚರಂಡಿಯಲ್ಲಿ ತ್ಯಾಜ್ಯ ತುಂಬಿಕೊಂಡಿದ್ದು, ಸ್ಥಳೀಯ ನಿವಾಸಿಗಳ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿ ಸೋಮವಾರ ಸ್ವಚ್ಛತಾ ಕಾರ್ಯ ನಡೆಸಿತು.

ಈ ಕಾಲೊನಿಗಳಲ್ಲಿ ಸುಮಾರು 150 ಕುಟುಂಬಗಳು ವಾಸಿಸುತ್ತಿದ್ದು, ಇಲ್ಲಿ ಚರಂಡಿಗಳು ನಿರ್ಮಾಣಗೊಂಡು 15 ವರ್ಷ ಕಳೆದಿದೆ. ಇಲ್ಲಿಯವರೆಗೂ ಚರಂಡಿಯ ಸ್ವಚ್ಛತೆಯ ಬಗ್ಗೆ ಸ್ಥಳೀಯ ಆಡಳಿತ ಗಮನ ಹರಿಸಿರಲಿಲ್ಲ. ಇರಿಂದಾಗಿ ಚರಂಡಿ ಹಾಗೂ ರಸ್ತೆ ಬದಿಯಲ್ಲಿ ತ್ಯಾಜ್ಯ ಮತ್ತು ಮಣ್ಣು ತುಂಬಿದ್ದು, ಮಳೆಗಾಲದಲ್ಲಿ ಚರಂಡಿ ನೀರು ಮನೆಯಂಗಳಕ್ಕೆ ಹರಿಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಹೀಗಾಗಿ ಕಳೆದೆರಡು ದಿನಗಳ ಹಿಂದೆ ಗ್ರಾಮಸ್ಥರೆಲ್ಲ ಸೇರಿ ಪಂಚಾಯಿತಿಯ ಪಿಡಿಒ ಚಂದ್ರಶೇಖರ್ ಹಾಗೂ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪರಮೇಶ ಕುಮಾರ್ ಅವರಿಗೆ ಸ್ಥಳೀಯ ಸಮಸ್ಯೆ ಬಗ್ಗೆ ಗಮನ ಸೆಳೆದ ಸಂದರ್ಭ, ಚರಂಡಿ ಹಾಗೂ ಮೋರಿಗಳನ್ನು ಸ್ವಚ್ಛಗೊಳಿಸುವ ಭರವಸೆ ನೀಡಿದ್ದರು.

‘ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೊನಿಯ ಪೂರ್ಣ ಸ್ವಚ್ಛತಾ ಕಾರ್ಯಕ್ರಮಕ್ಕೆ ಪಂಚಾಯಿತಿ ಮುಂದಾಗಿದೆ. ಸ್ವಚ್ಛತೆಗೆ ಅಲ್ಲಿನ ಸ್ಥಳೀಯರು ಹಾಗೂ ಗ್ರಾಮಸ್ಥರು ಸಹಕಾರ ನೀಡಿದ್ದು, ಮುಂದಿನ ದಿನಗಳಲ್ಲಿ ಸ್ವಚ್ಛ ಸುಂದರ ಗ್ರಾಮವನ್ನಾಗಿ ಮಾಡುತ್ತೇವೆ’ ಎಂದು ಎರಪರೆಯ ಜಿ.ಎನ್.ರೇವಣ್ಣ ತಿಳಿಸಿದರು.

ಸ್ಥಳೀಯರಾದ ಪರಮೇಶ್, ಮುರುಗನ್, ಕೇಶವ, ರತ್ನಮ್ಮ ಉಷಾ, ಕಲಾ, ಗ್ರಾಮ ಪಂಚಾಯಿತಿ ಸಿಬ್ಬಂದಿ ಜವರಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-51-878195261

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.