ಮಡಿಕೇರಿ: ಗ್ರಾಮ ಸಭೆಯ ನಿರ್ಣಯವೇ ಅಂತಿಮ. ಗ್ರಾಮ ಪಂಚಾಯಿತಿಗಳಿಗೆ ಇರುವ ಅಧಿಕಾರ ಮತ್ತು ಕಾನೂನಿನ ಬಗ್ಗೆ ಕೈಪಿಡಿ ಮುದ್ರಿಸಿ ವಿತರಿಸಿ ಜನರಲ್ಲಿ ಅರಿವು ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆಯ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್.ಪಾಟೀಲ ಸೂಚಿಸಿದರು.

ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ 2026-27 ನೇ ಸಾಲಿನ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆ ತಯಾರಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.

ಸರ್ಕಾರ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡಿದ್ದು, ಅದನ್ನು ನಿಯಮಾನುಸಾರ ಬಳಸಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಭಿವೃದ್ದಿಗೆ ಕಾನೂನಿನ ಪ್ರಕಾರ ಅಧಿಕಾರ ಚಲಾಯಿಸಬೇಕು. ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು. ಆ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಿಷ್ಠಗೊಳಿಸಬೇಕು ಎಂದು ಪ್ರತಿಪಾದಿಸಿದರು.

ಸ್ಥಳೀಯವಾಗಿಯೇ ಶಾಲೆ, ಆಸ್ಪತ್ರೆ, ಅಂಗನವಾಡಿ ಮತ್ತಿತರ ಅಗತ್ಯ ಹುದ್ದೆಗಳ ನೇಮಕವೂ ಆಗಬೇಕು ಎಂದು ಅಭಿಪ್ರಾಯಪಟ್ಟ ಅವರು ಗ್ರಾಮ ಅಭಿವೃದ್ಧಿಗೆ ಸ್ಥಳೀಯರೇ ಚಿಂತಿಸಬೇಕು ಎಂದು ಸಲಹೆ ನೀಡಿದರು.

ಮಹಾತ್ಮ ಗಾಂಧಿಯವರ ಕನಸಿನ ರಾಮರಾಜ್ಯ ಮತ್ತು ರಾಜೀವ್ ಗಾಂಧಿ ಅವರ ಗ್ರಾಮೀಣಾಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಆಧುನಿಕ ತಂತ್ರಜ್ಞಾನದ ಆಶಯದೊಂದಿಗೆ ಗ್ರಾಮಗಳ ಅಭಿವೃದ್ಧಿ ಮತ್ತಷ್ಟು ಆಗಬೇಕು ಎಂದರು.

ಮುಂದೆ ಜುಲೈ ತಿಂಗಳಲ್ಲಿ ಹೊದ್ದೂರಿನಲ್ಲಿ ನಡೆಯುವ ಗ್ರಾಮ ಸಭೆಯಲ್ಲಿ ಭಾಗವಹಿಸುವೆ ಎಂದರು.

ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ವಿಶೇಷ ಸಲಹೆಗಾರ ಕೆಂಪೇಗೌಡ ಮಾತನಾಡಿ, ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಚುನಾಯಿತ ಸರ್ಕಾರ ಇರಬೇಕು ಎಂಬುದು ಸರ್ಕಾರದ ಆಶಯವಾಗಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಆಡಳಿತಕ್ಕೆ ವಿಶೇಷವಾದ ಅಧಿಕಾರ ನೀಡಲಾಗಿದೆ ಎಂದರು.

ಜನರ ನಿರೀಕ್ಷೆಗೆ ತಕ್ಕಂತೆ ಅಧಿಕಾರ ನಡೆಸಬೇಕು. ಪಂಚಾಯತ್ ಅಭಿವೃದ್ಧಿ ಸಂಬಂಧಿಸಿದಂತೆ ಎಲ್ಲಾ ಮತದಾರರಿಗೂ ಮಾಹಿತಿ ನೀಡಬೇಕು. ಫಲಾನುಭವಿಗಳ ಆಯ್ಕೆ ಮತ್ತು ಕ್ರೀಯಾ ಯೋಜನೆ ರೂಪಿಸುವುದು ಹಾಗೂ ವಾರ್ಡ್ ಸಭೆ ನಡೆಸುವುದು ಸೇರಿದಂತೆ ಪಂಚಾಯತ್ ರಾಜ್ ಆಶಯವನ್ನು ಅರಿತುಕೊಂಡು ಕೆಲಸ ಮಾಡಬೇಕು ಎಂದರು.

2027-28 ನೇ ಸಾಲಿನಲ್ಲಿ ಜನರ ಯೋಜನೆಯಾಗಿ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಂತನೆ ನಡೆಸಿದ್ದು, ಅದರಂತೆ ಜನರ ಭಾಗವಹಿಸುವಿಕೆ ಅತಿಮುಖ್ಯ ಎಂದು ಅವರು ಹೇಳಿದರು.

ಸ್ಥಳೀಯರೊಬ್ಬರು ಮಾತನಾಡಿ ವಸತಿ ಯೋಜನೆಯಡಿ ಸರ್ಕಾರದಿಂದ ನೀಡುವ ಅನುದಾನ ಸಾಲುವುದಿಲ್ಲ, ಆದ್ದರಿಂದ ₹ 5 ಲಕ್ಷದವರೆಗೆ ಅನುದಾನ ಹೆಚ್ಚಿಸಬೇಕು ಎಂದು ಕೋರಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಕುಸುಮಾವತಿ, ಹಮೀದ್, ಲಕ್ಷ್ಮಿ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಅಬ್ದುಲ್ ನಬಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್, ಆಡಳಿತಾಧಿಕಾರಿ ಪಿ.ಪಿ.ಕವಿತಾ, ಪಿಡಿಒ ವತ್ಸಲಾ, ಅಬ್ದುಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-51-794459368

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.