ಸಿದ್ದಾಪುರ: ಗುಹ್ಯ ಗ್ರಾಮದಲ್ಲಿ ಕಾಡಾನೆಗಳು ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದು, ಕೃಷಿ ಫಸಲನ್ನು ನಾಶ ಮಾಡುತ್ತಿವೆ.

ಗುಹ್ಯ ಗ್ರಾಮದ ಕಕ್ಕಟ್ಟುಕಾಡು, ಗುಹ್ಯ ಅಗಸ್ತ್ಯೇಶ್ವ ದೇವಾಲಯ, ಪದ್ಮ ಎಸ್ಟೇಟ್ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಕಳೆದ ಒಂದು ವಾರಗಳಿಂದ ಕಾಡಾನೆ ಹಿಂಡು ಬೀಡುಬಿಟ್ಟಿದೆ. ಹಿಂಡಿನಲ್ಲಿ ಮರಿ ಆನೆಗಳು ಸೇರಿದಂತೆ ಸುಮಾರು 18ಕ್ಕೂ ಹೆಚ್ಚು ಕಾಡಾನೆಗಳಿದ್ದು, ಕಾಫಿ ತೋಟದಲ್ಲಿ ಗಿಡಗಳನ್ನು ನಾಶ ಮಾಡುತ್ತಿವೆ. ಕಳೆದ ಒಂದು ವಾರಗಳಿಂದ ಕಾಡಾನೆ ಹಿಂಡು ತೋಟದಿಂದ ತೋಟಕ್ಕೆ ತೆರಳುತ್ತಿದ್ದು, ಕಾಫಿ ಸೇರಿದಂತೆ ಗಿಡಗಳಿಗೆ ಹಾನಿ ಮಾಡುತ್ತಿವೆ.

ಗುಹ್ಯ ಗ್ರಾಮದ ಕಕ್ಕಟ್ಟುಕಾಡುವಿನ ವಿದ್ಯಾರ್ಥಿಗಳು ಪಟ್ಟಣದಿಂದ ಮನೆಗೆ ತೆರಳುವ ವೇಳೆ ಹಿಂಡಿನಲ್ಲಿದ್ದ ಕಾಡಾನೆಯೊಂದು ದಾಳಿಗೆ ಮುಂದಾಗಿದ್ದು, ಕೂದಲೆಳೆ ಅಂತರದಲ್ಲಿ ವಿದ್ಯಾರ್ಥಿಗಳು ತಪ್ಪಿಸಿಕೊಂಡಿದ್ದಾರೆ. ಕಾಡಾನೆ ಉಪಟಳದಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಇದೇ ತಿಂಗಳ ಅಂತ್ಯದಲ್ಲಿ ಶಾಲಾ ಕಾಲೇಜು ಆರಂಭವಾಗಲಿದ್ದು, ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಾನೆ ಹಿಂಡನ್ನು ಅಟ್ಟಲು ಯತ್ನಿಸಿದರೂ, ತೋಟದಲ್ಲೇ ಬೀಡುಬಿಟ್ಟಿವೆ.

ಒಂಟಿ ಸಲಗ: ಬುಧವಾರ ರಾತ್ರಿ ವಿರಾಜಪೇಟೆ ಮುಖ್ಯ ರಸ್ತೆಯ ಮೂಲಕ ಒಂಟಿ ಸಲಗವೊಂದು ಗುಹ್ಯ ಗ್ರಾಮದ ಕಡೆ ಹೊರಟ ವಿಡಿಯೊವನ್ನು ಸ್ಥಳೀಯರು ಚಿತ್ರೀಕರಿಸಿದ್ದಾರೆ. ಒಂದೆಡೆ ಕಾಡಾನೆ ಹಿಂಡು ಬೀಡುಬಿಟ್ಟರೇ, ಮತ್ತೊಂದು ಭಾಗದಲ್ಲಿ ಒಂಟಿ ಸಲಗ ಗ್ರಾಮಕ್ಕೆ ಲಗ್ಗೆ ಇಟ್ಟಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಗುಹ್ಯ ರಸ್ತೆಯಲ್ಲಿ ಬೀದಿ ದೀಪಗಳು ಇಲ್ಲದ ಕಾರಣ ಗ್ರಾಮಸ್ಥರಿಗೆ ಸಮಸ್ಯೆಯಾಗಿದೆ. ಕಾಡಾನೆಗಳನ್ನು ಕೂಡಲೇ ಕಾರ್ಯಾಚರಣೆ ನಡೆಸಿ ಕಾಡಿಗೆ ಅಟ್ಟಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-51-106114707

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.