ಸೋಮವಾರಪೇಟೆ: ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳನ್ನು ಪ್ರಾರಂಭದಲ್ಲಿಯೇ ಪತ್ತೆಹಚ್ಚಿದಲ್ಲಿ ಅದಕ್ಕೆ ಸೂಕ್ತ ಚಿಕಿತ್ಸೆ ಪಡೆದರೆ ಸಮಸ್ಯೆಯಿಂದ ಮುಕ್ತರಾಗಲು ಸಾಧ್ಯ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆಯ ಡೀನ್ ಡಾ. ಲೋಕೇಶ್ ತಿಳಿಸಿದರು.

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸೋಮವಾರಪೇಟೆ ತಾಲ್ಲೂಕು ಘಟಕ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ-ಬೋಧಕ ಆಸ್ಪತ್ರೆ ಹಾಗೂ ಮಾದಾಪುರ ಗ್ರಾಮ ಪಂಚಾಯಿತಿಯ ಸಂಯುಕ್ತ ಆಶ್ರಯದಲ್ಲಿ ಶನಿವಾರ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಸೇವೆಗಳನ್ನು ತಲುಪಿಸುವ ಉದ್ದೇಶದಿಂದ ಇಂತಹ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಸಾಕಷ್ಟು ತಜ್ಞ ವೈದ್ಯರಿದ್ದು, ಎಲ್ಲ ಕಾಯಿಲೆಗಳಿಗೂ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲ ಸೌಲಭ್ಯಗಳನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು’ ಎಂದರು.

ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ನಂಜುಂಡಯ್ಯ ಮಾತನಾಡಿ, ‘ಗರ್ಭಿಣಿಯರು ಹಾಗೂ ಮಕ್ಕಳ ಆರೋಗ್ಯ ರಕ್ಷಣೆಗೆ ಸರ್ಕಾರದಿಂದ ಹಲವು ಸೌಲಭ್ಯಗಳು ಲಭ್ಯವಿವೆ. ಗರ್ಭಧಾರಣೆಯ ಆರಂಭದಿಂದಲೇ ನಿಯಮಿತ ತಪಾಸಣೆ, ಪೌಷ್ಟಿಕ ಆಹಾರ ಹಾಗೂ ವೈದ್ಯರ ಸಲಹೆಗಳನ್ನು ಪಾಲಿಸುವುದು ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಅಗತ್ಯವಾಗಿದೆ’ ಎಂದರು.

ತಾಲ್ಲೂಕು ಪಂಚಾಯಿತಿ ಇಒ ಪರಮೇಶ್ ಕುಮಾರ್ ಮಾತನಾಡಿ, ‘ಪ್ರತಿಯೊಬ್ಬರೂ ನಿಯಮಿತ ವ್ಯಾಯಾಮವನ್ನು ಪ್ರತಿನಿತ್ಯ ಮಾಡಿದರೆ, ಆರೋಗ್ಯವಂತರಾಗಿರಬಹುದು. ಅರೋಗ್ಯ ಇದ್ದರೆ ಮಾತ್ರ ಕೆಲಸವನ್ನು ಬದ್ಧತೆಯಿಂದ ಮಾಡಲು ಸಾಧ್ಯ’ ಎಂದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಸವಿತಾ ರೈ, ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಶ್ವ ಕುಂಬೂರು, ಪಂಚಾಯಿತಿ ಆಡಳಿತಾಧಿಕಾರಿ ಹೇಮಂತ್, ಪಿಡಿಒ ರವಿ, ಕರವೇ ಅಧ್ಯಕ್ಷ ಬಬಿನ್ ನಾಗಂಡ ಇದ್ದರು.

ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ರಕ್ತದೊತ್ತಡ, ಮಧುಮೇಹ ಪರೀಕ್ಷೆ, ಮಹಿಳಾ ಮತ್ತು ಮಕ್ಕಳ ಆರೋಗ್ಯ ತಪಾಸಣೆ, ಕೀಲು, ನೇತ್ರ, ಮಾನಸಿಕ, ಚರ್ಮ ಸಮಸ್ಯೆ, ಸರ್ಜರಿ ಸೇರಿದಂತೆ ವಿವಿಧ ಸೇವೆಗಳನ್ನು ಒದಗಿಸಲಾಯಿತು.

ಸಾರ್ವಜನಿಕರು, ಪಂಚಾಯಿತಿ ಸಿಬ್ಬಂದಿ ಮತ್ತು ಪತ್ರಕರ್ತರು ರಕ್ತದಾನ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-51-1426061745

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.