ಗೋಣಿಕೊಪ್ಪಲಿನಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದಲ್ಲಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗಾಗಿ ಪ್ರಸ್ತಾವವೊಂದನ್ನು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಸಲ್ಲಿಸಲಾಗಿದೆ.
ಡಾ.ಕೆ.ಎಂ.ಸತೀಶ್‌ಕುಮಾರ್ ಕೊಡಗು ಜಿಲ್ಲಾ ಆರೋಗ್ಯಾಧಿಕಾರಿ
ಡಾ.ಲೋಕೇಶ್
ಕೆಲವೊಂದು ರೊಬೊಟಿಕ್ ಶಸ್ತ್ರಚಿಕಿತ್ಸೆ ಕ್ಯಾನ್ಸರ್ ಥೆರಪಿ ಸೇರಿದಂತೆ ಹಲವು ಬೇಡಿಕೆಗಳು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶನಾಲಯದಲ್ಲಿ ಪ್ರಸ್ತಾವ ಸಲ್ಲಿಸಲು ಪರಿಶೀಲನಾ ಹಂತದಲ್ಲಿವೆ
ಡಾ.ಎ.ಜೆ.ಲೋಕೇಶ್ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ
ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲೂ ಭರಪೂರ ಬೇಡಿಕೆ
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೂ ಕೇಂದ್ರ ಬಜೆಟ್ ಮೇಲೆ ಸಾಲು ಸಾಲು ನಿರೀಕ್ಷೆಗಳಿವೆ. ಮುಖ್ಯವಾಗಿ ಇಲ್ಲಿನ ವೈದ್ಯಕೀಯ ಕಾಲೇಜಿನಲ್ಲಿ ಸದ್ಯ 150 ಸೀಟುಗಳಿವೆ. ಇವುಗಳನ್ನು 200ಕ್ಕೆ ಏರಿಕೆ ಮಾಡಲು ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ. ಸ್ನಾತಕೋತ್ತರ ಪದವಿ ಸೀಟುಗಳ ಸಂಖ್ಯೆ 100 ಇದ್ದು ಅವುಗಳನ್ನೂ ಏರಿಕೆ ಮಾಡಬೇಕಿದೆ. ಈಗ ಬಿಎಸ್‌ಸಿ ನರ್ಸಿಂಗ್ ಕಾಲೇಜನ್ನು ಸಂಸ್ಥೆ ತನ್ನ ಸೀಮಿತ ಸಂಪನ್ಮೂಲಗಳನ್ನು ಬಳಸಿಕೊಂಡು ನಡೆಸುತ್ತಿದೆ. ಇಲ್ಲಿ 400 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಕಾಲೇಜಿಗೆ ಸ್ವಂತ ಕಟ್ಟಡ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯ ಬೋಧನಾ ಹುದ್ದೆಗಳ ಮಂಜೂರಾತಿ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಬೇಕಿದೆ. ರೊಬೊಟಿಕ್ ಶಸ್ತ್ರಚಿಕಿತ್ಸೆಗೂ ಉಪಕರಣಗಳನ್ನು ನೀಡಬೇಕಿದೆ. ಇದೆಲ್ಲಕ್ಕಿಂತ ಮಿಗಿಲಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆಯಬೇಕು ಎನ್ನುವುದು ಇಲ್ಲಿನ ಬಹುಜನರ ಒತ್ತಾಯವಾಗಿದೆ.