ಶನಿವಾರಸಂತೆ: ಇಲ್ಲಿಗೆ ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗುಳ ಗ್ರಾಮದಲ್ಲಿರುವ ಪುರಾಣ ಪ್ರಸಿದ್ದ ಶ್ರೀ ಲಕ್ಷ್ಮಿ ಚನ್ನಿಗರಾಯ ದೇವಾಲಯದ ಪುನರ್ ಪ್ರತಿಷ್ಠಾಪನೆ ಮತ್ತು ಶ್ರೀ ಜೋಡಿ ಹನುಮಂತ ದೇವರುಗಳ ವಿಶೇಷ ಪೂಜಾ ಮಹೋತ್ಸವ ಕಾರ್ಯಕ್ರಮ ಸಂಪನ್ನಗೊಂಡಿತು.

ದೇವಾಲಯವನ್ನು ದೇವಸ್ಥಾನ ಸಮಿತಿ ವತಿಯಿಂದ ಜೀರ್ಣೋದ್ದಾರಗೊಳಿಸಲಾಗಿತ್ತು. ಈ ಹಿನ್ನಲೆಯಲ್ಲಿ ನಡೆದ ಪುನರ್ ಪ್ರತಿಷ್ಠಾಪನೆ ಪೂಜಾ ಮಹೋತ್ಸವದ ಪ್ರಯುಕ್ತ ವೈಷ್ಣವ ಸಂಪ್ರದಾಯದಂತೆ ಪೂಜಾ ವಿದಿ ವಿಧಾನವನ್ನು ನೆರವೇರಿಸಲಾಯಿತು.

ಎರಡು ದಿನಗಳ ವರೆಗೆ ನಡೆದ ಪೂಜಾ ಮಹೋತ್ಸವದಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಗಂಗಾ ಪೂಜೆ, ಹೋಮ ಹವನ ಮುಂತಾದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.

ಈ ವೇಳೆ ಶ್ರೀ ಜೋಡಿ ಹನುಮಂತ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಪೂಜಾ ಮಹೋತ್ಸವ ಸಂಪನ್ನಗೊಳ್ಳುತ್ತಿದ್ದಂತೆ ಮಳೆ ಬಂದಿದ್ದು ವಿಶೇಷ ಎನಿಸಿತ್ತು. ಭಕ್ತಾದಿಗಳಿಗೆ ಸಂತಸ ತಂದಿತು.

ಪೂಜಾ ಮಹೋತ್ಸವದಲ್ಲಿ ರೈತರು, ಸ್ಥಳೀಯರು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದ ನೂರಾರು ಭಕ್ತರು ಬಂದು ಪಾಲ್ಗೊಂಡಿದ್ದರು. ಪೂಜಾ ಮಹೋತ್ಸವದ ಅಂಗವಾಗಿ 2 ದಿನವೂ ದೇವಸ್ಥಾನ ಸೇವಾ ಸಮಿತಿಯಿಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-51-1104182890

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.