ಮಡಿಕೇರಿ: ‘ಕೊಡಗಿನ ಎಲ್ಲ ಹೋಂಸ್ಟೇಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಸೂಚಿಸಿದರು.

ಗಡಿ ಭಾಗ ಕುಟ್ಟ ಗ್ರಾಮದ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಪ್ರಕರಣದ ಕುರಿತು ಮಂಗಳವಾರ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಲ್ಲೇಖಿಸಿದ ಸಚಿವರು, ‘ಅಧಿಕಾರಿಗಳು ಈ ವಿಷಯದಲ್ಲಿ ಕಟ್ಟೆಚ್ಚರ ವಹಿಸಬೇಕು’ ಎಂದರು.

ಶಾಸಕ ಡಾ.ಮಂತರ್ಗೌಡ, ‘ಕೆಲವೆಡೆ ನಿಯಮಗಳ ಉಲ್ಲಂಘನೆ ಯಾಗಿದೆ. ಪ್ರವಾಸೋದ್ಯಮ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ವರ್ಷಕ್ಕೊಮ್ಮೆಯಾದರೂ ಹೋಂಸ್ಟೇಗಳಲ್ಲಿ ನಿಯಮಗಳ ಪಾಲನೆ ಕುರಿತು ಪರಿಶೀಲಿಸಬೇಕು’ ಎಂದರು.

‘ಜಿಲ್ಲೆಯಲ್ಲಿ ಶೇ 20ಕ್ಕೂ ಅಧಿಕ ಹೋಂಸ್ಟೇಗಳು ನೋಂದಣಿ ಆಗಿಲ್ಲ. ಈಗ ಅವುಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗುತ್ತಿದೆ’ ಎಂದು ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-51-1375977029

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.