ಮಡಿಕೇರಿ: ಕೊಡಗು ಜಿಲ್ಲೆಯ ಕುಟ್ಟ ಪ್ರದೇಶದಲ್ಲಿರುವ ಖಾಸಗಿ ಹೋಂಸ್ಟೇಯಲ್ಲಿ ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯ ಪ್ರಕರಣದ ಕುರಿತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಭೋಸರಾಜು ಅವರು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಜೊತೆ ದೂರವಾಣಿ ಮೂಲಕ ಮಾತನಾಡಿ ಘಟನೆ ವಿವರಗಳನ್ನು ಪಡೆದುಕೊಂಡರು. ಜೊತೆಗೆ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಪ್ರಕರಣ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಅವರ ವಿವರಗಳನ್ನು ಬಹಿರಂಗಪಡಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.