ಮಡಿಕೇರಿ: ಕೊಡಗು ಜಿಲ್ಲೆಯ ಕೇರಳ ಗಡಿ ಭಾಗ ಕುಟ್ಟ ಸಮೀಪದ ದೇವಿ ವಿಲ್ಲಾ ಹೋಂಸ್ಟೇನಲ್ಲಿ ವಿದೇಶಿ ಮಹಿಳೆಯೊಬ್ಬರ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ, ಆ ಹೋಂಸ್ಟೇ ನೋಂದಣಿಯನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.

ಈ ಹೋಂಸ್ಟೇಗೆ ಪಿ.ಎ.ಪೊನ್ನಪ್ಪ ಎಂಬುವವರ ಹೆಸರಿನಲ್ಲಿ ಪರವಾನಗಿ ಪಡೆದಿದ್ದು, ಅದರ ಅವಧಿ 2029ರವರೆಗೂ ಇತ್ತು. ಆದರೆ, ಈಗ ಹೋಂಸ್ಟೇ ವಿರುದ್ಧ ಆರೋಪ ಕೇಳಿ ಬಂದಿದ್ದು ಅವರನ್ನು ಬಂಧಿಸಲಾಗಿದೆ. ಹೀಗಾಗಿ, ಈ ನೋಂದಣಿ ರದ್ದುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಘಟನೆ ಬಳಿಕ ಎಚ್ಚೆತ್ತಿರುವ ಜಿಲ್ಲಾ ಪೊಲೀಸರು ಪ್ರವಾಸೋದ್ಯಮ ಇಲಾಖೆಯೊಂದಿಗೆ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ‘ಈಗಾಗಲೇ ಹೋಂಸ್ಟೇಗಳಿಗೆ ನೀಡಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ ವನ್ನು(ಎಸ್ಒಪಿ) ಸಮರ್ಪಕವಾಗಿ ಪಾಲನೆಯಾಗದ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ. ಎಲ್ಲ ಹೋಂಸ್ಟೇ ಮಾಲೀಕರಿಗೆ ಕಠಿಣ ಎಚ್ಚರಿಕೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಹೊರರಾಜ್ಯದ ಕಾರ್ಮಿಕರು ಬಹುತೇಕ ಎಲ್ಲ ರೆಸಾರ್ಟ್, ಹೋಟೆಲ್, ಹೋಂಸ್ಟೇಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಹಿನ್ನೆಲೆ ಪರಿಶೀಲಿಸದ ಮಾಲೀಕರು, ಕಡಿಮೆ ವೇತನಕ್ಕೆ ಒಪ್ಪುತ್ತಾರೆ ಎಂಬ ಕಾರಣಕ್ಕೆ ಎಗ್ಗಿಲ್ಲದೇ ಅವರನ್ನೇ ನೇಮಿಸಿಕೊಳ್ಳು ತ್ತಿದ್ದಾರೆ. ಈಗಾಗಲೇ ಅಸ್ಸಾಂ ಸೇರಿ ಹೊರರಾಜ್ಯದ ಕಾರ್ಮಿಕರಿಂದ ಹೆಚ್ಚಿನ ಪ್ರಮಾಣದಲ್ಲಿ ಅಪರಾಧ ಕೃತ್ಯಗಳು ನಡೆದಿವೆ. ಹೀಗಿದ್ದರೂ, ಮಾಲೀಕರು ಸ್ಥಳೀಯ ಕಾರ್ಮಿಕರನ್ನು ನಿರ್ಲಕ್ಷಿಸಿ, ಹೊರರಾಜ್ಯದವರಿಗೆ ಆದ್ಯತೆ ನೀಡುತ್ತಿದ್ದಾರೆಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಕೊಡಗು ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ವಕೀಲ ಅಚ್ಚಂಡೀರ ಪವನ್ ಪೆಮ್ಮಯ್ಯ, ‘ಹೊರ ರಾಜ್ಯದ ಕಾರ್ಮಿಕರಿಂದ ಇನ್ನೆಷ್ಟು ಅಪರಾಧಗಳು ನಡೆಯಬೇಕು? ಈ ಘಟನೆಯಿಂದ ಎಚ್ಚೆತ್ತುಕೊಂಡು ಎಲ್ಲ ಮಾಲೀಕರೂ ಹೊರರಾಜ್ಯದವರ ಪೂರ್ವಾಪರ ಪರಿಶೀಲಿಸಿ ಕೆಲಸಕ್ಕೆ ತೆಗೆದುಕೊಳ್ಳಬೇಕು. ಅವರ ಮೇಲೆ ನಿಗಾ ಇರಿಸಬೇಕು’ ಎಂದು ಒತ್ತಾಯಿಸಿದರು.

‘ಹೊರರಾಜ್ಯದವರ ಎಲ್ಲ ಮಾಹಿತಿಗಳನ್ನು ಸಂಗ್ರಹಿಸಿದ ಬಳಿಕವೇ ನೇಮಿಸಿಕೊಳ್ಳಬೇಕು ಎಂದು ಪ್ರತಿ ಸಭೆಯಲ್ಲಿ ಸೂಚಿಸಿದರೂ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ. ಶೀಘ್ರವೇ ಪ್ರವಾಸೋದ್ಯಮ ಇಲಾಖೆ ಯೊಂದಿಗೆ ಸಭೆ ನಡೆಸಲಾಗುವುದು’ ಎಂದು ಎಸ್.ಪಿ ಆರ್.ಎನ್.ಬಿಂದು ಮಣಿ ತಿಳಿಸಿದರು. ‘ಸಂತ್ರಸ್ತ ಮಹಿಳೆ ಈಗ ಎಲ್ಲಿದ್ದಾರೆ, ಅವರು ಅಮೆರಿಕಕ್ಕೆ ಯಾವಾಗ ತೆರಳಲಿದ್ದಾರೆ ಎಂಬ ಕುರಿತು ಮಾಹಿತಿ ನೀಡಲು ಸಾಧ್ಯವಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-51-1994027752

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.