ಮಡಿಕೇರಿ: ವನ್ಯಜೀವಿಗಳಿಂದ ಒಂದೇ ಒಂದು ಮಾನವ ಜೀವ ಹಾನಿಯಾಗದಂತೆ ತಡೆಯಲು ಸಾಧ್ಯವಿರುವ ಎಲ್ಲ ಬಗೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದೇ ರೀತಿ ಕಾಡಂಚಿನಲ್ಲಿ ವಾಸಿಸುವ ಜನರೂ ಅರಣ್ಯ ಇಲಾಖೆಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವ ಮೂಲಕ ಸಹಕಾರ ಕೊಡಬೇಕು. ಈ ಮೂಲಕ ವನ್ಯಜೀವಿ– ಮಾನವ ಸಂಘರ್ಷ ತಡೆಗಟ್ಟಬಹುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಪ್ರತಿಪಾದಿಸಿದರು.

ಕುಶಾಲನಗರ ತಾಲ್ಲೂಕಿನ ದುಬಾರೆಯಲ್ಲಿ ಕಾವೇರಿ ನದಿಗೆ ತೂಗುಸೇತುವೆ ಮತ್ತು ಅಧಿಕಾರಿಗಳ ವಸತಿಗೃಹ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಈಗ ಒಂದು ಕಡೆ ಪ್ರಾಣಿಗಳ ಸಂಖ್ಯೆ ಹೆಚ್ಚುತ್ತಿದ್ದರೆ, ಮತ್ತೊಂದು ಕಡೆ ಕಾಡು ಕಿರಿದಾಗುತ್ತಿದೆ. ಇದರಿಂದ ವನ್ಯಜೀವಿ ಮಾನವ ಸಂಘರ್ಷ ಹೆಚ್ಚುತ್ತಿದೆ. ಎಷ್ಟೇ ಹಣ ಕೊಟ್ಟರೂ ಜೀವಕ್ಕೆ ಬೆಲೆ ಕಟ್ಟಲಾಗದು. ಹಾಗಾಗಿ, ಮಾನವ ಜೀವಹಾನಿ ಆಗದಂತೆ ಎಲ್ಲ ಕ್ರಮ ಕೈಗೊಳ್ಳಲು ಸೂಚನೆ ನೀಡಿರುವೆ. ಜೊತೆಗೆ, ತಜ್ಞರ ಸಲಹೆಗಳನ್ನೂ ಪಡೆಯುತ್ತಿರುವೆ ಎಂದರು.

ಆನೆ-ಮಾನವ ಸಂಘರ್ಷ ನಿಯಂತ್ರಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ಅವರು ವರದಿ ನೀಡಿದ್ದಾರೆ. ಕಾಡಂಚಿನ ಜನರು ಕೂಡ ಈ ಬಗ್ಗೆ ಸಲಹೆ ನೀಡಬೇಕು ಎಂದರು.

ರೈಲ್ವೆ ಬ್ಯಾರಿಕೇಡ್, ಆನೆ ಕಂದಕ ನಿರ್ಮಾಣಕ್ಕೆ ಹಣಕಾಸಿನ ಕೊರತೆ ಇಲ್ಲ. ಅನುದಾನದ ಕೊರತೆ ಇಲ್ಲ. ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಆದಷ್ಟು ಶೀಘ್ರ ಹೆಚ್ಚಿನ ಬ್ಯಾರಿಕೇಡ್ ಅಳವಡಿಸಲಾಗುವುದು ಎಂದರು.

ಜಾಗತಿಕ ತಾಪಮಾನ ಏರಿಕೆಯಂತಹ ದೊಡ್ಡ ಸವಾಲು ನಮ್ಮ ಮುಂದಿದೆ. ಹವಾನಿಯಂತ್ರಿತ ನಗರಿ ಎನಿಸಿದ್ದ ಬೆಂಗಳೂರಿನಲ್ಲೂ ತಾಪಮಾನ ಗಣನೀಯವಾಗಿ ಏರಿಕೆಯಾಗಿದೆ. ಇವೆಲ್ಲವೂ ಕಾಡು ನಾಶದಿಂದಾಗಿದೆ. ಹಾಗಾಗಿ, ಕಾಡನ್ನು ರಕ್ಷಿಸುವುದು ಸರ್ಕಾರ, ಅರಣ್ಯಾಧಿಕಾರಿಗಳ ಕರ್ತವ್ಯ ಮಾತ್ರವಲ್ಲ ಸಾರ್ವಜನಿಕರ ಕರ್ತವ್ಯವೂ ಆಗಿದೆ ಎಂದು ಹೇಳಿದರು.

ಭತ್ತದ ತೆನೆ ತಿನ್ನಲೆಂದು ನವೆಂಬರ್, ಡಿಸೆಂಬರ್, ಜನವರಿಯಲ್ಲಿ ಆನೆಗಳು ಕಾಡಿನಿಂದ ಹೊರಬರುತ್ತವೆ. ಆಗ ಸಂಘರ್ಷ ಹೆಚ್ಚಾಗುತ್ತದೆ. ಈ ವೇಳೆ ತೋಟದ ಮಾಲೀಕರು, ರೈತರು ಆನೆಗಳ ವಿಚಾರದಲ್ಲಿ ಸೌಹಾರ್ದದಿಂದ ನಡೆದುಕೊಳ್ಳಬೇಕು ಎಂದರು.

ಅರಣ್ಯದಂಚಿನ ಜನರಿಗೆ ಅನುಕೂಲವಾಗುವಂತೆ ಹಲವು ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಅವರ ಜೀವನೋಪಾಯಕ್ಕೆ ನೆರವಾಗುವಂತಹ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಶಾಲೆಗಳ ಅಭಿವೃದ್ಧಿಗೂ ಶ್ರಮಿಸುತ್ತಿದ್ದೇವೆ. ಸೆಕ್ಷನ್ 4, ಡೀಮ್ಡ್ ಅರಣ್ಯ ಮೊದಲಾದ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಭರವಸೆ ನೀಡಿದರು.

ಸಾರ್ವಜನಿಕರನ್ನು ಪ್ರೀತಿಯಿಂದ ಮಾತನಾಡಿಸಿ, ಸೌಜನ್ಯದಿಂದ ಅವರೊಂದಿಗೆ ವರ್ತಿಸಿ. ಆದರೆ, ಯಾವುದೇ ಕಾರಣಕ್ಕೂ ಕಾನೂನು ಮೀರದಿರಿ.ಸೌಜನ್ಯದಿಂದ ವರ್ತಿಸಿ ಎಂದರೆ ಕಾನೂನು ಮೀರಿ ಎಂದು ಅರ್ಥವಲ್ಲ. ಕಾನೂನು ಎಲ್ಲರಿಗೂ ಒಂದೇ. ಆ ಕಾನೂನನ್ನು ಸಾರ್ವಜನಿಕರಿಗೆ ಸೌಜನ್ಯದಿಂದ ಮನದಟ್ಟು ಮಾಡಿಸಿ ಎಂದು ಅಧಿಕಾರಿಗಳಿಗೆ ಅವರು ಕಿವಿಮಾತು ಹೇಳಿದರು.

ಜೇನುಪೆಟ್ಟಿಗೆ, ಹೊಲಿಗೆ ಯಂತ್ರ ಹಾಗೂ ಸರ್ಕಾರಿ ಶಾಲೆಗಳಿಗೆ ಇಂಟರ್ ಆಕ್ಟಿವ್ ಪ್ಯಾನಲ್ ವಿತರಿಸುತ್ತಿರುವ ಒಟ್ಟು 04 ಜನ ರೈತರಿಗೆ ₹ 50,400ವೆಚ್ಚದಲ್ಲಿ ಹನಿ ಎಕ್ಸಾಟ್ರಾಕ್ಟರ್, ಒಬ್ಬ ರೈತರಿಗೆ ಜೇನು ಕೃಷಿ ಬಗ್ಗೆ ತರಬೇತಿ, 30 ಜನ ಕಾಡಂಚಿನ ಗ್ರಾಮದ ಫಲಾನುಭವಿಗಳಿಗೆ ಜೇನುಪೆಟ್ಟಿಗೆ ವಿತರಣೆ, 15 ಜನ ಕಾಡಂಚಿನ ಗ್ರಾಮದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಚೆಟ್ನಳ್ಳಿ ಮತ್ತು ಚಿಕ್ಕತ್ತೂರು ಸರ್ಕಾರಿ ಶಾಲೆಗಳಿಗೆ ಇಂಟರ್ ಆಕ್ಟಿವ್ ಪ್ಯಾನಲ್ ವಿತರಣೆ ಕಾರ್ಯಗಳು ಇದೇ ವೇಳೆ ನಡೆದವು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್, ಸಿಸಿಎಫ್ ಸೋನಲ್, ಡಿಸಿಎಫ್ ಸೀಮಾ, ಅಭಿಷೇಕ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಮನೆಹಳ್ಳಿ ಮಠದ ಮಹಾಂತ ಶಿವಲಿಂಗ ಸ್ವಾಮೀಜಿ, ಕಲ್ಲಹಳ್ಳಿ ಮಠದ ರುದ್ರಮುನಿ ಸ್ವಾಮೀಜಿ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕುಶಾಲನಗರ ತಾಲ್ಲೂಕು ಅಧ್ಯಕ್ಷ ವಿ.ಪಿ.ಶಶಿಧರ್, ಹಿರಿಯ ವಕೀಲ ಚಂದ್ರಮೌಳಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-51-1780386609

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.