ಮಡಿಕೇರಿ: ಕೊಡಗಿನಲ್ಲಿರುವ ಅಕ್ರಮ ಮತದಾರರ ಪತ್ತೆ ಹಾಗೂ ಅವರ ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ಚುನಾವಣಾ ಆಯೋಗವು ‘ವಿಶೇಷ ತೀವ್ರ ಪರಿಷ್ಕರಣೆ’ ಯನ್ನು ಕೊಡಗು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ಸಂಘಟನೆಯ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ‘ಪ್ರತಿಯೊಬ್ಬ ಮತದಾರನನ್ನೂ ಭೌತಿಕವಾಗಿ ಪರಿಶೀಲಿಸಲು ಕೊಡಗು ಜಿಲ್ಲೆಯಲ್ಲಿ ಬೂತ್ ಮಟ್ಟದ ‘ವಿಶೇಷ ತೀವ್ರ ಪರಿಷ್ಕರಣೆ' ನಡೆಸಬೇಕು. ಕೊಡವ ಭೂಮಿಯ ಮಣ್ಣಿಗೆ ಸಂಬಂಧಿಸಿದ 1971ಕ್ಕೂ ಮುಂಚಿನ ಸಿಂಧು ಪೌರತ್ವ, ಪೂರ್ವಜರ ದಾಖಲೆಗಳನ್ನು ಸಲ್ಲಿಸಲು ವಿಫಲರಾಗುವ ಎಲ್ಲಾ ಅಕ್ರಮ ಮತದಾರರನ್ನು ತಕ್ಷಣವೇ ಪಟ್ಟಿಯಿಂದ ಕೈಬಿಡಬೇಕು. ಅಕ್ರಮ ಮತದಾರರನ್ನು ಸೇರಿಸಲು ನೆರವಾದ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ವಿರುದ್ಧ ಕಠಿಣ ಕ್ರಿಮಿನಲ್ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ಈ ಅಕ್ರಮ ಮತದಾರರ ಗುರುತಿನ ಚೀಟಿಗಳೇ ಕೊಡವರ ರಾಜಕೀಯ ಅಸ್ತಿತ್ವದ ವಿರೂಪಕ್ಕೆ ಮೂಲ ಕಾರಣವಾಗಿದೆ ಎಂದೂ ಕಿಡಿಕಾರಿದರು.

ಸ್ಥಳೀಯ ಆದಿಮಸಂಜಾತ ಕೊಡವರ ಹೆಸರುಗಳ ರದ್ಧತಿಯನ್ನು ತಡೆಗಟ್ಟಬೇಕು ಮತ್ತು ಅವರ ಕಾನೂನುಬದ್ಧತೆಯನ್ನು ದೃಢೀಕರಿಸಬೇಕು. ವಲಸೆ, ಉದ್ಯೋಗ ಮತ್ತು ಭೂ ದಾಖಲೆಗಳ ಕೊರತೆಯಿಂದಾಗಿ, ಮತದಾರರ ಪಟ್ಟಿ ಪರಿಷ್ಕರಣೆ ಸಮಯದಲ್ಲಿ ನೈಜ ಕೊಡವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಹುನ್ನಾರ ನಡೆಯುವ ಸಂಭವ ಹೆಚ್ಚಾಗಿದೆ. ಇದಕ್ಕಾಗಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಅಡಿಯಲ್ಲಿ ‘ವಿಶೇಷ ಕೊಡವ ಪರಿಶೀಲನಾ ಕೋಶ'ವನ್ನು ಸ್ಥಾಪಿಸಬೇಕು. ಈ ಕೋಶವು ವಂಶಾವಳಿ, ಕುಟುಂಬ-ಒಕ್ಕ, ಮನೆ-ಪೆದ, ಕುಲದ ದಾಖಲೆಗಳು ಮತ್ತು ಸಮುದಾಯದ ದೃಢೀಕರಣದ ಆಧಾರದ ಮೇಲೆ ನೈಜ ಕೊಡವ ಮತದಾರರನ್ನು ಗುರುತಿಸಬೇಕು. ಸೂಕ್ತ ಭೌತಿಕ ಪರಿಶೀಲನೆ ಮತ್ತು ವಿಚಾರಣೆಗೆ ಅವಕಾಶ ನೀಡದೆ ಯಾವುದೇ ಕಾರಣಕ್ಕೂ ಒಬ್ಬನೇ ಒಬ್ಬ ಕೊಡವ ಮತದಾರನ ಹೆಸರನ್ನೂ ಪಟ್ಟಿಯಿಂದ ತೆಗೆದುಹಾಕಬಾರದು ಎಂದು ಮನವಿ ಮಾಡಿದರು.

ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿ, ಪ್ರಧಾನಿ, ಗೃಹ ಸಚಿವರು, ಜನಸಂಖ್ಯಾ ಬದಲಾವಣೆ ಕುರಿತ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರು, ಜನಗಣತಿ ಆಯುಕ್ತರು ಹಾಗೂ ಮುಖ್ಯ ಚುನಾವಣಾಧಿಕಾರಿಗೆ ಸಲ್ಲಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಆದಿಮನಿ ಅವರು ಮನವಿ ಪತ್ರ ಸ್ವೀಕರಿಸಿದರು. ಚೋಳಪಂಡ ಜ್ಯೋತಿ ನಂಜಪ್ಪ, ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಮುದ್ದಿಯಡ ಲೀಲಾವತಿ, ಅಳಮಂಡ ಜೈ ಗಣಪತಿ, ಪಟ್ಟಮಾಡ ಕುಶ, ನಂದೇಟಿರ ರವಿ ಸುಬ್ಬಯ್ಯ, ಮಂದಪಂಡ ಮನೋಜ್ ಮಂದಣ್ಣ, ಕಿರಿಯಮಾಡ ಶೇರಿನ್, ಅರೇಯಡ ಗಿರೀಶ್, ಅಪ್ಪಾರಂಡ ಪ್ರಸಾದ್ ಕುಶಾಲಪ್ಪ, ಪುದಿಯೋಕಡ ಕಾಶಿ ಕರುಂಬಯ್ಯ, ಮಣವಟ್ಟಿರ ಚಿಣ್ಣಪ್ಪ, ಪುದಿಯೋಕಡ ಪೃಥ್ವಿ, ಪುಟ್ಟಿಚಂಡ ಡಾನ್ ದೇವಯ್ಯ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-51-1500721693

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.