ಕೊಡಗು: ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವ ನಾಗೇಶ್ ಭೇಟಿ

ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಭಾನುವಾರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂದಿನ ತಡೆಗೋಡೆ ಕುಸಿತ ನೋಡಲು ತೆರಳಿದ್ದ ಅವರಲ್ಲಿ ಸ್ಥಳೀಯರು ವಾಹನ ಸಂಚಾರ ನಿಷೇಧಿಸದೆ ದುರಸ್ತಿ ಕಾರ್ಯ ನಡೆಸುವಂತೆ ಮನವಿ ಮಾಡಿದರು.
ಮಡಿಕೇರಿ ಒಂದು ಕಿ.ಮೀ ದೂರವಷ್ಟೆ ಇದೆ. ಆದರೆ ವಾಹನ ಸಂಚಾರ ನಿಷೇಧಿಸಿರುವುದರಿಂದ 10 ಕಿ.ಮೀ ದೂರ ಪ್ರಯಾಣ ಮಾಡಬೇಕಿದೆ ಎಂದು ಅಳಲು ತೋಡಿಕೊಂಡರು.
ಹಾರಂಗಿ: ಸಂಗೀತ ಕಾರಂಜಿ ವೇಳೆ ಬಂದ ಕಾಡಾನೆ; ಪ್ರವಾಸಿಗರು ಚಿಲ್ಲಾಪಿಲ್ಲಿ
ಶೀಘ್ರವಾಗಿ ಕಾಮಗಾರಿ ಮುಗಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಮಳೆಯಿಂದ ಗುಡ್ಡದ ಒಂದು ಪಾರ್ಶ್ವ ಕುಸಿದಿದ್ದ ಮದೆನಾಡಿಗೂ ಭೇಟಿ ನೀಡಿದ ಅವರು ಪರಿಶೀಲನೆ ನಡೆಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.