ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು | ಉಂಗುರ‌ ನುಂಗಿದ್ದ ಮಗು ಸಾವು

Last Updated 23 ಮಾರ್ಚ್ 2023, 11:30 IST
ಅಕ್ಷರ ಗಾತ್ರ

ಸಿದ್ದಾಪುರ (ಕೊಡಗು): ಉಂಗುರ ನುಂಗಿದ್ದ 8 ತಿಂಗಳಿನ ಮಗು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದೆ.

ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ನಿವಾಸಿ ಮುನೀರ್ ಅವರ 8 ತಿಂಗಳ ಗಂಡು ಮಗು ಬುಧವಾರ ರಾತ್ರಿ ಆಕಸ್ಮಿಕವಾಗಿ ಉಂಗುರವನ್ನು ನುಂಗಿತ್ತು. ಈ ವೇಳೆ ಉಂಗುರ ಹೊರತೆಗೆಯಲು ಸಾಧ್ಯವಾಗದೇ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.

ಬಳಿಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಉಂಗುರವನ್ನು ಹೊರತೆಗೆದರು. ಆದರೆ ತೀವ್ರ ಉಸಿರಾಟದ ತೊಂದರೆಯಿಂದ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT