ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ಹುಲಿ ದಾಳಿಗೆ ಜೀವತೆತ್ತವರು ಒಂದೇ ಕುಟುಂಬದವರು!

Last Updated 13 ಫೆಬ್ರವರಿ 2023, 7:01 IST
ಅಕ್ಷರ ಗಾತ್ರ

ಗೋಣಿಕೊಪ್ಪಲು (ಕೊಡಗು ಜಿಲ್ಲೆ): ಕಳೆದ 24 ಗಂಟೆಯಲ್ಲಿ ಹುಲಿ ದಾಳಿಯಿಂದ ಮೃತಪಟ್ಟವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ.

ನಾಗರಹೊಳೆ ಅರಣ್ಯದಂಚಿನ ಕೇರಳ ಗಡಿಭಾಗವಾದ ಕೆ.ಬಾಡಗ ಗ್ರಾಮದ ಚೇತನ್ (18) ಎಂಬುವವರು ಭಾನುವಾರ ಸಂಜೆ ಹುಲಿ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಭಾನುವಾರ ಸಂಜೆ ಹುಲಿ ದಾಳಿಗೆ ಮೃತಪಟ್ಟ ಚೇತನ್ (18) ಅವರ ತಾತ ರಾಜು (75) ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಇವರ ಮೇಲಿನ ದಾಳಿ ತಡೆಯಲು ಯತ್ನಿಸಿದ ರಾಜು ಪುತ್ರ ಹಾಗೂ ಚೇತನ್ ತಂದೆ ಮಧು ಅವರಿಗೂ ಗಾಯಗಳಾಗಿವೆ. ಅವರನ್ನು‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಲಿ ದಾಳಿಯಿಂದ ಆಕ್ರೋಶಗೊಂಡಿರುವ ಕೃಷಿ ಕಾರ್ಮಿಕರು ಘಟನಾಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಸಹ ಸ್ಥಳದತ್ತ ಹೊರಟಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಸೆರೆಗೆ ಮುಂದಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT