ಮಡಿಕೇರಿ: ಕೊಡಗು ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ಇಬ್ಬರು ವಿಚಾರಣಾಧೀನ ಕೈದಿಗಳ ಮಧ್ಯೆ ನಡೆದಿದ್ದ ಹೊಡೆದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹೇಮಂತ್ (26) ಮೈಸೂರಿನ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾನೆ.

ಈತನ ಸಂಬಂಧಿ ಹಾಗೂ ಎರಡು ವರ್ಷಗಳಿಂದ ಜೈಲಿನಲ್ಲಿದ್ದ ರಾಜೇಶ್ (36) ಸೋಮವಾರ ಹರಿತವಾದ ಆಯುಧದಿಂದ ಇರಿದಿದ್ದ. ತೀವ್ರವಾಗಿ ಗಾಯಗೊಂಡಿದ್ದ ಹೇಮಂತ್ನನ್ನು ಮೈಸೂರಿನ ಆಸ್ಪತ್ರೆಗೆ, ರಾಜೇಶ್ನನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಟಿ.ಶೆಟ್ಟಿಗೇರಿ ಗ್ರಾಮದಲ್ಲಿನ ಮೂರೂವರೆ ಎಕರೆ ಜಾಗಕ್ಕೆ ಸಂಬಂಧಿಸಿ ಈ ಇಬ್ಬರ ಕುಟುಂಬಗಳ ನಡುವೆ ಈ ಹಿಂದಿನಿಂದಲೂ ವಿವಾದ ಇದೆ. ಕೊಲೆ ಯತ್ನ, ಹೊಡೆದಾಟ ಪ್ರಕರಣಗಳು ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಆಂತರಿಕ ತನಿಖೆ ಕೈಗೊಂಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-51-289075075

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.