ಮಡಿಕೇರಿ: ಮಾರ್ಚ್ 25ರಿಂದ 27 ರವರೆಗೆ ನಗರದ ಕೊಡವ ಸಮಾಜದಲ್ಲಿ 3 ದಿನಗಳ ಸಮಗ್ರ ಶೈಕ್ಷಣಿಕ ಕಾರ್ಯಕ್ರಮ ‘ಎಜು ಕನೆಕ್ಟ್ ಮತ್ತು ಜಾಬ್ ಮೇಳ 2026’ ನಡೆಯಲಿದೆ.

ಈ ಬೃಹತ್ ಕಾರ್ಯಕ್ರಮವನ್ನು ರೀಡ್ಟೆಕ್ ಸಂಸ್ಥೆಯ ವತಿಯಿಂದ ಕೊಡಗು ವಿಶ್ವವಿದ್ಯಾಲಯ ಮತ್ತು ನ್ಯಾಚುರಲ್ ಸೋರ್ಸ್ ಡೆವಲಪ್ಮೆಂಟ್ ಸೆಂಟರ್ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ.

ಈ ಮೇಳದಲ್ಲಿ ಪದವೀಧರರು ಮತ್ತು ತರಬೇತಿ ಪಡೆದ ಶಿಕ್ಷಕರು (ಬಿ.ಇಡಿ, ಡಿ.ಇಡಿ, ಎಂ.ಇಡಿ, ಬಿ.ಪಿಇಡಿ, ಎಂಪಿ.ಇಡಿ) ಅನುಭವ ಹೊಂದಿದ ಶಿಕ್ಷಕರು, ಉಪನ್ಯಾಸಕರು ಹಾಗೂ ಬೋಧಕೇತರ ಉದ್ಯೋಗ ಹುಡುಕುವವರಿಗೆ ಸ್ಥಳದಲ್ಲಿಯೇ ನೋಂದಣಿ ಮತ್ತು ಸಂದರ್ಶನದ ಅವಕಾಶ ಇರಲಿದೆ. ಬೆಂಗಳೂರು ಮತ್ತು ಮೈಸೂರಿನ 12 ಪರಿಣಿತ ತರಬೇತುದಾರರಿಂದ, 12 ವಿವಿಧ ವಿಷಯಗಳ ಮೇಲೆ ಒಟ್ಟು 30 ವಿಶೇಷ ತರಬೇತಿ ಕಾರ್ಯಾಗಾರ ನಡೆಯಲಿದೆ.

ಕೊಡಗು ಜಿಲ್ಲೆಯ ಎಲ್ಲಾ ಉದ್ಯೋಗಾಕಾಂಕ್ಷಿ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಮಾಹಿತಿಗೆ ಮೊ: 6364558383 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-51-841415761

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.