ಸೋಮವಾರಪೇಟೆ: ‘ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ತವರು ಮನೆಯಂತೆ 112 ವರ್ಷಗಳಿಂದ ನಾಡು, ನುಡಿಗೆ ರಾಜಕೀಯರಹಿತವಾಗಿ ಸೇವೆ ಸಲ್ಲಿಸುತ್ತ ಬಂದಿದೆ’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅಭಿಪ್ರಾಯಪಟ್ಟರು.

ಪರಿಷತ್ತಿನ ಜಿಲ್ಲಾ, ತಾಲ್ಲೂಕು ಹಾಗೂ ಹೋಬಳಿ ಘಟಕಗಳಿಂದ ಇಲ್ಲಿನ ಸಾಹಿತ್ಯ ಭವನದಲ್ಲಿ ಶನಿವಾರ ಆಯೋಜಿಸಿದ್ದ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಪರಿಷತ್ ರಾಜ್ಯದಾದ್ಯಂತ ಸಾಹಿತ್ಯ, ಸಂಸ್ಕೃತಿ ಮತ್ತು ಭಾಷೆಯ ಸಂರಕ್ಷಣೆಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಭಾಷಾಭಿಮಾನ ಬೆಳೆಸುತ್ತಿದೆ’ ಎಂದರು.

9ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆ ಜಲಜಾ ಶೇಖರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಹಿತಿ ಲಾವಣ್ಯ ಮೋಹನ್, ಕಸಾಪ ತಾಲ್ಲೂಕು ಘಟಕದ ಗೌರವ ಕಾರ್ಯದರ್ಶಿ ಎ.ಪಿ.ವೀರರಾಜು, ಶಾಂತಳ್ಳಿ ಪ್ಯಾಕ್ಸ್ ಸಿಇಒ ಡಿ.ಪಿ.ಜೋಯಪ್ಪ, ಕಸಾಪ ಸದಸ್ಯ ಎಸ್.ಆರ್.ಶಿವಪ್ಪ, ಕೃಷಿ ಸಾಧಕ ಎ.ಡಿ.ಮೋಹನ್ ಕುಮಾರ್, ಸಾಹಿತಿ ಜಾನ್ ಪೌಲ್ ಡಿಸೋಜ ಅವರನ್ನು ಸನ್ಮಾನಿಸಲಾಯಿತು. ರಸಪ್ರಶ್ನೆಯಲ್ಲಿ ಜೆ.ಸಿ.ಶೇಖರ್(ಪ್ರಥಮ), ಶ.ಗ.ನಯನತಾರಾ(ದ್ವೀತಿಯ) ಶುಭ ತೃತೀಯ ಸ್ಥಾನ ಪಡೆದರು. ವೇದಿಕೆಯಲ್ಲಿ ತಾಲ್ಲೂಕು ಅಧ್ಯಕ್ಷ ಎಸ್.ವಿಜೇತ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-51-1877045691

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.