ಶನಿವಾರಸಂತೆ: ಇಲ್ಲಿಗೆ ಸಮೀಪದ ಕೊಡ್ಲಿಪೇಟೆ ಹೋಬಳಿಗೆ ಸೇರಿದ ಕೋರಗಲ್ಲು ಗ್ರಾಮದ ಬಸವೇಶ್ವರ ದೇವಾಲಯದ ವಿಗ್ರಹ ಪುನರ್ ಪ್ರತಿಷ್ಠಾಪನೆ ಹಾಗೂ ದೇವಾಲಯ ಲೋಕಾರ್ಪಣೆ ಮಹೋತ್ಸವ ಶುಕ್ರವಾರ ನಡೆಯಿತು.

ಧಾರ್ಮಿಕ ಸಮಾರಂಭದಲ್ಲಿ ಸಾನಿಧ್ಯ ವಹಿಸಿದ್ದ ಕಲ್ಲುಮಠದ ಮಹಂತಸ್ವಾಮೀಜಿ ಮಾತನಾಡಿ, ‘ದೇವಾಲಯಗಳು ಭಾರತೀಯ ನಾಗರಿಕ ಸಂಸ್ಕೃತಿಯ ಕುರುಹುಗಳು. ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತ ದೇಶದಲ್ಲಿ ಸರ್ವರ ಸಹಭಾಗಿತ್ವವೂ ಶ್ಲಾಘನೀಯವಾದದ್ದು’ ಎಂದರು.

ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ‘ಇಂದು ಹಳ್ಳಿಗಳು ನಗರಗಳಾಗುತ್ತಿದ್ದು, ಮೂಲ ಸಂಸ್ಕೃತಿ ಹಾಗೂ ಸಂಸ್ಕಾರಗಳು ನಾಶವಾಗದಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಸಂಸ್ಕಾರ ತುಂಬಿದ ಶಿಕ್ಷಣದ ಅಗತ್ಯವಿದೆ. ಈ ನಿಟ್ಟಿನಲ್ಲಿ ಮನೆಯಲ್ಲಿ ತಾಯಂದಿರು ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡಬೇಕು’ ಎಂದು ಕಿವಿಮಾತು ಹೇಳಿದರು.

ಶಿಡಿಗಳಲೆ ಮಠದ ಇಮ್ಮಡಿ ಶಿವಲಿಂಗಸ್ವಾಮೀಜಿ, ಶರಣ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಮೂರ್ತಿ, ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಾಂಭಶಿವಯ್ಯ ಮಾತನಾಡಿದರು.

ದೇವಾಲಯ ಸಮಿತಿ ಅಧ್ಯಕ್ಷ ಕೆ.ಪಿ.ಮಲ್ಲಿಕಾರ್ಜುನ, ಉಪಾಧ್ಯಕ್ಷ ಧರ್ಮಪ್ಪ, ಗುರುರಾಜ್, ಕೌಶಿಕ್, ಚಂದ್ರಶೇಖರ್ ಭಾಗವಹಿಸಿದ್ದರು. ಬೆಳಿಗ್ಗೆಯಿಂದ ದೇವಾಲಯದಲ್ಲಿ ರುದ್ರಾಭಿಷೇಕ, ಕಳಸಾರೋಹಣ, ಬಿಲ್ವಾರ್ಚನೆ, ಪುಷ್ಪಾರ್ಚನೆ ಇನ್ನು ಮೊದಲಾದ ಧಾರ್ಮಿಕ ಕೈಂಕರ್ಯ ನಡೆದವು. ಗುರುವಾರ ಸಂಜೆ ಗಂಗಾಪೂಜೆಯೊಂದಿಗೆ ಹಸು, ಕರುವಿನೊಂದಿಗೆ ಪೂರ್ಣಕುಂಭ ಮೆರವಣಿಗೆ ನಡೆಯಿತು. ಉದ್ಬೂರಿನ ರವಿಕುಮಾರ್ ತಂಡದವರಿಂದ ವೀರಗಾಸೆ ಕುಣಿತ ನಡೆಯಿತು. ಕೊಡ್ಲಿಪೇಟೆಯ ಸೋಮಶೇಖರ ಶಾಸ್ತ್ರಿ ಪೂಜಾ ಕೈಂಕರ್ಯ ನೆರವೇರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-51-1833634535

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.