ಕುಶಾಲನಗರ: ತಾಲ್ಲೂಕಿನ ಕೂಡಿಗೆಯಲ್ಲಿರುವ ಕ್ರೀಡಾ ವಸತಿ ಶಾಲೆಯಲ್ಲಿ ₹3 ಕೋಟಿ ವೆಚ್ಚದ ಆಸ್ಟ್ರೋಟರ್ಫ್ ಮೈದಾನದ ಹೆಚ್ಚುವರಿ ಕಾಮಗಾರಿಗಳಿಗೆ ಶಾಸಕ ಡಾ. ಮಂತರ್ ಗೌಡ ಶನಿವಾರ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಯುವಕ ಯುವತಿಯರು ಕ್ರೀಡಾ ಶಾಲೆಗೆ ಅಯ್ಕೆಗೊಂಡ ನಂತರ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸುವ ಮೂಲಕ ಸಂಸ್ಥೆಗೆ ಹಾಗೂ ಜಿಲ್ಲೆಗೆ ಕೀರ್ತಿ ತರಬೇಕು ಎಂದರು.

ಕ್ರೀಡಾಕೂಟಗಳಿಗೆ ಉತ್ತಮ ತರಬೇತಿಗಾಗಿ ಇಂತಹ ಮೈದಾನಗಳ ಅವಶ್ಯಕತೆ ಇದೆ. ರಾಷ್ಟ್ರೀಯ ಕ್ರೀಡಾ ನಿಯಮಾನುಸಾರ ಆಸ್ಟ್ರೋಟರ್ಫ್ ಮೈದಾನದ ಅಭಿವೃದ್ಧಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ರಾಜ್ಯ ಸರ್ಕಾರ ಕ್ರೀಡಾ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸುತ್ತಿದೆ. ₹3 ಕೋಟಿ ವೆಚ್ಚದಲ್ಲಿ ಕ್ರೀಡಾ ಶಾಲೆಯ ಕ್ರೀಡಾಂಗಣದ ಅಭಿವೃದ್ಧಿಪಡಿಸಲಾಗುವುದು. ಜೊತೆಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ತಂದು ಜಿಲ್ಲಾ ಕ್ರೀಡಾಂಗಣದ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ ಅರುಣ್ ಮಾಚಯ್ಯ ಮಾತಾನಾಡಿ, ಕ್ರೀಡಾ ವಸತಿ ಶಾಲೆಗಳ ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸುವ ಮೂಲಕ ಕ್ರೀಡಾ ಶಾಲಾ ವಿದ್ಯಾರ್ಥಿಗಳ ಕ್ರೀಡೆ ಹಾಗೂ ಶೈಕ್ಷಣಿಕ ಪ್ರಗತಿಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯಿ ಚಕ್ರವರ್ತಿ, ಕೂಡಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಪಿ. ಹಮೀದ್, ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸೋಮಶೇಖರ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಫಿಲೋಮಿನಾ, ಈರಪ್ಪ, ಚಂದ್ರ, ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಯಪ್ರಕಾಶ್, ಕ್ರೀಡಾ ತರಬೇತಿದಾರರಾದ ವೆಂಕಟೇಶ್, ದಿನಾಮಣಿ, ಸುರೇಶ್, ಗುತ್ತಿಗೆದಾರ ಮಂಜುನಾಥ, ಶಾಲಾ ಮುಖ್ಯ ಶಿಕ್ಷಕಿ ಅಶ್ವಿತ್, ಶಿಕ್ಷಕರ ವೃಂದ, ವಿವಿಧ ವಿಭಾಗದ ತರಬೇತಿದಾರರು, ಶಾಲಾ ಸಿಬ್ಬಂದಿ , ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-51-1641449417

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.