ನಾಪೋಕ್ಲು: ಕೊಡಗು ಜಿಲ್ಲಾ (ಕುಂಬಾರ)ರ ಸಂಘದ ನೇತೃತ್ವದಲ್ಲಿ ಜಿಲ್ಲಾ ಯುವ ಘಟಕ ಮತ್ತು ಜಿಲ್ಲಾ ಮಹಿಳಾ ಘಟಕದ ಸಹಯೋಗದಲ್ಲಿ ಕೊಡಗು ಜಿಲ್ಲಾ ಕುಲಾಲ ಕುಂಬಾರ ಬಾಂಧವರಿಗೆ ಕ್ರೀಡೋತ್ಸವ ಸಮ್ಮಿಲನ 2026 ಅನ್ನು ಮೇ 16, 17ರಂದು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡಿನ ಕೆಳಗಿನ ಮೈದಾನದಲ್ಲಿ ಆಯೋಜಿಸಲಾಗಿದೆ. ಕ್ರೀಡೋತ್ಸವದ ಸಮ್ಮಿಲನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಡಿಕೇರಿಯ ಕೋಟೆ ಗಣಪತಿ ದೇವಸ್ಥಾನದಲ್ಲಿ ಜರುಗಿತು.

ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸುವ ಮೂಲಕ ಬಿಡುಗಡೆ ಮಾಡಿದ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಅಧ್ಯಕ್ಷ ದಾಮೋದರ್ ಕೆ.ಕೆ ಮಾತನಾಡಿ, ‘ಇದು ಕೊಡಗು ಜಿಲ್ಲೆಯ ಕುಲಾಲ ಕುಂಬಾರ ಬಾಂಧವರ ಎರಡನೇ ವರ್ಷದ ಕಾರ್ಯಕ್ರಮವಾಗಿದೆ. ಈ ವರ್ಷವೂ ಬಹಳ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದರು.

ಮೇ 16ರಂದು ಬೆಳಿಗ್ಗೆ 7ಗಂಟೆಗೆ ಓಂಕಾರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕ್ರೀಡಾ ಜ್ಯೋತಿಯೊಂದಿಗೆ ಮೈದಾನಕ್ಕೆ ಕಾಲ್ನಡಿಗೆಯ ಮೂಲಕ ಸಾಗಿ ಗಣ್ಯರ ಸಮ್ಮುಖದಲ್ಲಿ ಕ್ರೀಡೋತ್ಸವ ಉದ್ಘಾಟನೆಗೊಳ್ಳಲಿದೆ. ಅಂದೇ ಜಿಲ್ಲೆಯಾದ್ಯಂತ ಆಯ್ಕೆಯಾದ ತಂಡಗಳ ಕ್ರಿಕೆಟ್ ಟೂರ್ನಿ ನಡೆಯಲಿದೆ. ಮಹಿಳೆಯರಿಗೆ ಯುವಕರಿಗೆ, ಮಕ್ಕಳಿಗೆ, ಹಿರಿಯರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. 17ರಂದು ಸಮಾರೋಪ ಸಮಾರಂಭ, ಬಹುಮಾನ ವಿತರಣೆ ನಡೆಯಲಿದೆ’ ಎಂದರು.

‘ಎಲ್ಲ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯ ಕುಲಾಲ ಕುಲ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಆ ಮೂಲಕ ಜಿಲ್ಲೆಯದ್ಯಂತ ಕುಲಾಲ ಕುಂಬಾರ ಬಾಂಧವರು ಇನ್ನಷ್ಟು ಸಂಘಟಿತರಾಗಬೇಕು’ ಎಂದರು.

ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಕಾಂತಿಮಣಿ ಮಾತನಾಡಿ, ‘ಜಿಲ್ಲೆಯ ಕುಲಾಲ ಕುಂಬಾರ ಬಾಂಧವರ ಸಂಘಟನೆಗಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಮಹಿಳೆಯರಿಗೆ ಹಲವು ಕ್ರೀಡೆಗಳು ಆಯೋಜಿಸಿದ್ದು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಬಾಂಧವರು ಭಾಗವಹಿಸಿ’ ಎಂದು ಮನವಿ ಮಾಡಿದರು.

ಜಿಲ್ಲಾ ಯುವ ಘಟಕದ ಅಧ್ಯಕ್ಷ ಜೆಪಿ ಕುಲಾಲ್ ಅವರು ಮಾತನಾಡಿ, ‘ಯುವಕರಿಗೆ ಕ್ರಿಕೆಟ್ ಟೂರ್ನಿ ಆಯೋಜನೆ ಮಾಡಿದ್ದು ಈಗಾಗಲೇ ಜಿಲ್ಲೆಯಾದ್ಯಂತ ಇರುವ ಕುಲಾಲ ಕುಂಬಾರ ಬಾಂಧವರು ತಮ್ಮ ತಂಡವನ್ನು ನೋಂದಾಯಿಸಿಕೊಂಡಿದ್ದು ಪ್ರತಿ ತಂಡದಲ್ಲೂ ಅತ್ಯುತ್ತಮ ಆಟಗಾರರಿದ್ದಾರೆ’ ಎಂದರು.

ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಉಪಾಧ್ಯಕ್ಷ ಎಂ.ಡಿ ಸುರೇಶ್ ಕುಲಾಲ್ , ಜಿಲ್ಲಾ ಘಟಕದ ಪದಾಧಿಕಾರಿಗಳು ಯುವ ಘಟಕದ ಪದಾಧಿಕಾರಿಗಳು ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-51-1830626250

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.