ಸೋಮವಾರಪೇಟೆ: ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಆಹೋರಾತ್ರಿ ಧರಣಿ 15ನೇ ದಿನಕ್ಕೆ ಮುಂದುವರಿದಿದೆ.

ಈ ಭಾಗದಲ್ಲಿರುವ ಸುಮಾರು 6 ಸಾವಿರ ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸರಾಜ್ ಅವರಿಗೆ ಮನವಿ ಮಾಡಲಾಗಿತ್ತು. ಸಚಿವರಿಂದ ಶುಕ್ರವಾರ ಉತ್ತರ ಬಂದಿದ್ದು, ಕೊಡಗು ಜಿಲ್ಲಾ ಪಂಚಾಯಿತಿಗೆ ಸೂಕ್ತ ಕ್ರಮಕ್ಕೆ ಆದೇಶ ನೀಡಿದ್ದಾರೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಅಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಳ ಗುರುತಿಸಿ, ಸ್ಥಳಿಯ ನಿವೇಶನ ರಹಿತರಿಗೆ ನೀಡಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಸೂಚಿಸಿದ್ದಾರೆ ಎಂದು ಸಮಿತಿ ಪ್ರಧಾನ ಕಾರ್ಯದರ್ಶಿ ಸುದೀಪ್ ತಿಳಿಸಿದರು.

ನಾವು ಸುಂಟಿಕೊಪ್ಪ, ಮಾದಾಪುರ, ಕುಂಬೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಸ್ಥಳ ಗುರುತಿಸಿ ನಿವೇಶನ ನೀಡುವಂತೆ ಸಚಿವರಲ್ಲಿ ಮನವಿ ಮಾಡಿದ್ದೆವು. ಅದರಂತೆ ನಮ್ಮ ಮನವಿಗೆ ಸ್ಪಂದಿಸಿರುವ ಸಚಿವರು ಸ್ಥಳ ಗುರುತಿಸುವಂತೆ ಸೂಚಿಸಿದ್ದಾರೆ. ನಮಗೆ ನಿವೇಶನ ನೀಡುವ ತನಕ ನಮ್ಮ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ ಎಂದು ಸಮಿತಿ ಜಿಲ್ಲಾಧ್ಯಕ್ಷ ಮೊಣ್ಣಪ್ಪ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-51-753429167

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.