ಮಡಿಕೇರಿ: ‘ನಾನೀಗ ರಾಜ್ಯದ ಎಲ್ಲ ಜಿಲ್ಲೆಗಳ ಪ್ರವಾಸ ಮಾಡಿ, ಎಲ್ಲ ಜಿಲ್ಲೆಗಳ ಕಾರ್ಮಿಕ ಸಂಘಟನೆಗಳೊಂದಿಗೆ ಮಾತನಾಡಿ, ಅವರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ನೀಡಬೇಕಾದ ವೇತನದ ಕುರಿತು ಸಲಹೆ ನೀಡುವೆ’ ಎಂದು ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್ ಹೇಳಿದರು.

ಈಗಷ್ಟೇ ಸಮಿತಿ ರಚನೆಯಾಗಿದೆ. 26 ಮಂದಿ ಸದಸ್ಯರಿದ್ದಾರೆ. ಇನ್ನು ಮುಂದೆ ಕಾರ್ಮಿಕರ ಪರವಾದ ನಮ್ಮ ಕೆಲಸ ಆರಂಭವಾಗಲಿದೆ ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದಕ್ಕೂ ಮುನ್ನ ಅವರು, ‘ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ಧೋರಣೆ ಅನುಸರಿಸುತ್ತಿದೆ’ ಎಂದು ವಾಗ್ದಾಳಿ ನಡೆಸಿದರು.

ಬಂಡವಾಳಷಾಹಿಗಳ ಪರವಾಗಿ ಹಾಗೂ ಕಾರ್ಮಿಕರಿಗೆ ತೊಂದರೆಯಾಗುವಂತಹ ಕೋಡ್ಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ. ಇದಕ್ಕೆ ಎಲ್ಲೆಡೆ ತೀವ್ರತರವಾದ ಆಕ್ಷೇಪ ಉಂಟಾದರೂ ಕಿವಿಗೊಡದೇ ಕೇಂದ್ರ ಜಾರಿಗೆ ತರಲು ಮುಂದಾಗಿದೆ ಎಂದು ಆರೋಪಿಸಿದರು.

ಅಮೆರಿಕ– ಇರಾನ್ ಸಂಘರ್ಷದ ವೇಳೆ ಗಲ್ಫ್ನಲ್ಲಿ ಭಾರತದಿಂದ ಹೋಗಿದ್ದ ಸಾಕಷ್ಟು ಕಾರ್ಮಿಕರು ಸಮಸ್ಯೆಗಳಿಗೆ ಸಿಲುಕಿದರು. ಅವರ ಒಂದೂ ಸಮಸ್ಯೆಗಳನ್ನು ಕೇಂದ್ರ ಸರ್ಕಾರ ಆಲಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಭಾವ ಸೃಷ್ಟಿಯಾಗಿದೆ. ಅಡುಗೆ ಅನಿಲ ದೊರೆಯುತ್ತಿಲ್ಲ. ಇಂತಹ ಸಂಕಷ್ಟದ ಸನ್ನಿವೇಶದಲ್ಲೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿದೇಶದ ಪ್ರವಾಸ ಮಾಡುತ್ತಿದ್ದಾರೆ. ಖಾಸಗಿ ಕಂಪನಿಯೊಂದರ ಚಾಕಲೇಟ್ ನೀಡಿದ್ದನ್ನೇ ದೊಡ್ಡ ಸುದ್ದಿಯನ್ನಾಗಿ ಆ ಕಂಪನಿಗೆ ಪ್ರಚಾರ ಕೊಡುತ್ತಿದ್ದಾರೆ. ಇಲ್ಲಿ ದೇಶದ ಜನರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಧಾನಿಯವರು ವಿರೋಧ ಪಕ್ಷದವರೊಂದಿಗೆ ಚರ್ಚೆ ಮಾಡುವುದಿರಲಿ, ಕನಿಷ್ಠ ಪಕ್ಷ ತಮ್ಮ ಸಂಪುಟದಲ್ಲೂ ಚರ್ಚೆ ನಡೆಸದೇ ತಾವೇ ಏಕಾಏಕಿ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಅವರಿಗೆ ದೇಶದ ಕಾರ್ಮಿಕರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನೀಡಿದ ಗ್ಯಾರಂಟಿಗಳನ್ನು ಬಿಜೆಪಿ ಉತ್ತರದ ರಾಜ್ಯಗಳಲ್ಲಿ ಜಾರಿಗೆ ತರುತ್ತಿದೆ. ಇಲ್ಲಿ ಜಾರಿಗೆ ಮಾಡಲು ಮುಂದಾದಾಗ ಹುಸಿ ಆರೋಪಗಳನ್ನು ಬಿಜೆಪಿ ಮಾಡಿತ್ತು. ಈಗ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡರಾದ ತೆನ್ನಿರಾ ಮೈನಾ, ಹಂಸ, ಪ್ರಕಾಶ್ ಆಚಾರ್ಯ, ದಿನೇಶ್ ಶೆಟ್ಟಿ ಹಾಗೂ ಜಗದೀಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-51-1360290972

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.