ವಿರಾಜಪೇಟೆ: ಕೊಡಗು ಜಿಲ್ಲೆಯ ನೆಲ, ಜಲ ಸಂಪತ್ತಿಗೆ ಮಾರಕವಾಗಿರುವ ಭೂಪರಿವರ್ತನೆಯನ್ನು ನಿಲ್ಲಿಸಬೇಕು ಎಂದು ಕೊಡಗು ಮತ್ತು ಕಾವೇರಿ ಉಳಿಸಿ ಅಭಿಯಾನದ ಸಂಯೋಜಕ, ನಿವೃತ್ತ ಕರ್ನಲ್ ಸಿ.ಪಿ.ಮುತ್ತಣ್ಣ ಅವರು ಸರ್ಕಾರವನ್ನು ಒತ್ತಾಯಿಸಿದರು.

ಪಟ್ಟಣದ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೆಲ ಶ್ರೀಮಂತ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಹಣದಾಸೆಗೆ ಜಿಲ್ಲೆಯ ಹಲವೆಡೆ ಭೂಪರಿವರ್ತನೆ ಮಾಡಿ ಬಡಾವಣೆಗಳನ್ನು ನಿರ್ಮಿಸುತ್ತಿವೆ. ಇದೀಗ ಹೊರಗಿನ ವ್ಯಕ್ತಿಗಳು ಜಿಲ್ಲೆಯಲ್ಲಿ ಬಡಾವಣೆಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಕೃಷಿಭೂಮಿ ಭೂಪರಿವರ್ತನೆಗೊಂಡರೆ ಜಿಲ್ಲೆಯ ಜಲಮೂಲಗಳು ಬರಿದಾಗಿ ಮುಂದಿನ ದಿನಗಳಲ್ಲಿ ಕೊಡಗಿನ ಜನತೆ ಕುಡಿಯುವ ನೀರಿನ ಸಮಸ್ಯೆ ಎದುರಿಸಬೇಕಾಗುತ್ತದೆ. ಆದ್ದರಿಂದ ಅಕ್ರಮ ಭೂ ಪರಿವರ್ತನೆ ಮಾಡಿದ ಹಿಂದಿನ ಜಿಲ್ಲಾಧಿಕಾರಿ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ’ ಎಂದರು.

ಸಂಸ್ಥೆಯ ಪದಾಧಿಕಾರಿ ಮಾಳೇಟಿರ ಶ್ರೀನಿವಾಸ್ ಮಾತನಾಡಿ, ‘ಕೆಲವೆಡೆ ಕೃಷಿಭೂಮಿಯೆಂದು ತೋರಿಸಿ ಕಡಿಮೆ ಶುಲ್ಕ ಪಾವತಿಸಿ ನೋಂದಣಿ ಮಾಡಿ ಸರ್ಕಾರಕ್ಕೆ ವಂಚಿಸಿ ಭೂಪರಿವರ್ತನೆ ಮಾಡಿ ಬಡಾವಣೆ ನಿರ್ಮಿಸಲಾಗುತ್ತಿದೆ. ಸ್ಥಳೀಯ ಗ್ರಾಮ ಪಂಚಾಯತಿಯಿಂದ ಯಾವುದೇ ಅನುಮೋದನೆಯನ್ನೂ ಪಡೆದುಕೊಂಡಿರುವುದಿಲ್ಲ. ಒತ್ತುವರಿಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ಸರ್ಕಾರ ಕೂಡಲೇ ಸರ್ವೆ ಹಾಗೂ ತನಿಖೆ ನಡೆಸಿ ಒತ್ತುವರಿಗೊಂಡಿರುವ ಸರ್ಕಾರಿ ಭೂಮಿಯನ್ನು ಸ್ಥಳೀಯ ವಸತಿ ರಹಿತ ಬಡವರಿಗೆ ನಿವೇಶಕ್ಕೆ ನೀಡಬೇಕು’ ಎಂದು ಒತ್ತಾಯಿಸಿದರು.

ಸಂಸ್ಥೆಯ ಪದಾಧಿಕಾರಿ ಮಾಳೇಟಿರ ಕಾಳಯ್ಯ ಮಾತನಾಡಿ, ‘ಜಿಲ್ಲೆಯ ಹಲವೆಡೆ ಅಕ್ರಮವಾಗಿ ನಿರ್ಮಿಸಲಾಗುತ್ತಿರುವ ಬಡಾವಣೆಗಳಿಗೆ ಕಪ್ಪುಹಣವನ್ನು ಬಳಸುತ್ತಿರುವ ಶಂಕೆಯಿದೆ. ಕೆಲವೆಡೆ ನಿರ್ಮಿಸುತ್ತಿರುವ ಬಡಾವಣೆಯಿಂದ ಪರಿಸರಕ್ಕೆ ಧಕ್ಕೆಯಾಗುತ್ತಿದೆ’ ಎಂದು ಆರೋಪಿಸಿದರು.

ಮಡಿಕೇರಿಯ ಮೊದೂರಿನ ಶಿವಶಂಕರ್ ಮಾತನಾಡಿದರು. ಗೋಷ್ಠಿಯಲ್ಲಿ ಮಾಳೇಟಿರ ದೊರೆ ನಂಜಪ್ಪ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-51-1507229720

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.