ಸೋಮವಾರಪೇಟೆ: ಕೂಲಿ ಕಾರ್ಮಿಕರು ಹಾಗೂ ಬಡ ನಿವೇಶನ ರಹಿತರಿಗೆ ಉಚಿತ ನಿವೇಶನ ನೀಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಹುಜನ ಕಾರ್ಮಿಕ ಸಂಘಟನೆ ವತಿಯಿಂದ ಕುಂಬೂರು ಪೈಸಾರಿಯಲ್ಲಿ ನಡೆಯುತ್ತಿರುವ ಆಹೋರಾತ್ರಿ ಧರಣಿ 24ನೇ ದಿನಕ್ಕೆ ಕಾಲಿಟ್ಟಿದೆ.

ಮೇ 28ರಂದು ರಾಷ್ಟ್ರೀಯ ಬಿಎಸ್ಪಿಯ ರಾಜ್ಯನಾಯಕರಾದ ಮಾರಸಂದ್ರ ಮುನಿಯಪ್ಪ, ಮಾಜಿ ಶಾಸಕ ಸಿ.ಎಂ.ಇಬ್ರಾಹಿಂ, ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್, ಮಾಜಿ ಶಾಸಕ ಎಚ್.ಡಿ.ಬಸವರಾಜು ಅವರು ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ಕೆ. ಮೊಣ್ಣಪ್ ತಿಳಿಸಿದರು.

ಮೇ 29ರಂದು ಮಡಿಕೇರಿಯಲ್ಲಿ ಧರಣಿ ನಿರತರ ಪ್ರತಿಭಟನೆ ನಡೆಯಲಿದೆ. ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪೈಸಾರಿ ಒತ್ತುವರಿಯನ್ನು ತೆರವುಗೊಳಿಸಿ, ಕನಿಷ್ಠ 50 ಎಕರೆ ಜಾಗವನ್ನು ಕಾಯ್ದಿರಿಸಬೇಕು. ಬಡ ನಿವೇಶನ ರಹಿತರಿಗೆ ನಿವೇಶನ ಹಂಚಬೇಕು ಎಂಬ ಆಗ್ರಹದೊಂದಿಗೆ ಕಾರ್ಮಿಕರ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು.

ಕುಂಬೂರು ಸ.ನಂ 225/1, 22/1-2 ಹಾಗೂ ಗರಗಂದೂರು ಸ.ನಂ.40/1ರ ಪೈಸಾರಿ ಜಾಗದಲ್ಲಿ ಧರಣಿ ನಿರತರಿಗೆ ನಿವೇಶನ ನೀಡಬೇಕು. ಅಲ್ಲಿಯ ತನಕ ಆಹೋರಾತ್ರಿ ಧರಣಿ ಮುಂದುವರಿಯಲಿದೆ ಎಂದು ಮೊಣ್ಣಪ್ಪ ಸ್ಪಷ್ಟಪಡಿಸಿದರು. ಸರ್ಕಾರ ಧರಣಿ ನಿರತರೊಂದಿಗೆ ಮಾತುಕತೆ ನಡೆಸುತ್ತಿಲ್ಲ. ಕಾರ್ಮಿಕರ ಮತ ಹಾಕಿದ ಜನಪ್ರತಿನಿಧಿಗಳು ಕಾರ್ಮಿಕರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಒಂದು ದಿನವೂ ಧರಣಿನಿರತರ ಕಷ್ಟ ಕೇಳಿಲ್ಲ ಎಂದು ನೋವು ತೋಡಿಕೊಂಡರು.

ಟಾರ್ಪಲ್ ಹೊದಿಕೆಯ ಶೆಡ್ನಲ್ಲಿ ಮಹಿಳೆಯರು, ಮಕ್ಕಳು, ಪುರುಷರು, ವೃದ್ಧರು ಧರಣಿ ನಡೆಸುತ್ತಿದ್ದಾರೆ. ಬದುಕಲು ಸೂರು ಪಡೆಯುವುದು ಸಂವಿಧಾನಬದ್ದ ಹಕ್ಕಾಗಿದ್ದು, ನಿವೇಶನ ಸಿಗುವ ತನಕ ಆಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಧರಣಿನಿರತರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-51-1902259185

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.