ಮಡಿಕೇರಿ: ಕೊಡಗು ಜಿಲ್ಲೆಯಲ್ಲಿರುವ 55,121 ಜಾನುವಾರುಗಳಿಗೆ 9ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕೆ ಹಾಕುವ ಅಭಿಯಾನ ಏಪ್ರಿಲ್ 23 ರಿಂದ ಒಂದು ತಿಂಗಳ ಕಾಲ ನಡೆಯಲಿದೆ. ಇದರಲ್ಲಿ 52,985 ದನ ಹಾಗೂ 2,136 ಎಮ್ಮೆಗಳೂ ಸೇರಿವೆ.

ಇಲ್ಲಿನ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಸಂಬಂಧ ಮಂಗಳವಾರ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಭಿತ್ತಿಪತ್ರ ಬಿಡುಗಡೆ ಮಾಡಿ ಮಾತನಾಡಿದರು.

ಏಪ್ರಿಲ್ 23 ರಿಂದ ಮೇ 22ರವರೆಗೆ ನಡೆಯಲಿರುವ ಈ ಅಭಿಯಾನದಲ್ಲಿ ಯಾವುದೇ ಜಾನುವಾರು ಲಸಿಕೆಯಿಂದ ಬಿಟ್ಟು ಹೋಗದಂತೆ ಎಚ್ಚರ ವಹಿಸುವಂತೆ ಅವರು ಸೂಚಿಸಿದರು.

ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಜಾನುವಾರುಗಳ ರಕ್ಷಣೆ, ಸುರಕ್ಷತೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಯಶಸ್ವಿಗೊಳಿಸಬೇಕು ಎಂದರು.

ಜಾನುವಾರುಗಳು ರೈತರ ಹಾಗೂ ರಾಷ್ಟ್ರದ ಆಸ್ತಿಯಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಜವಾಬ್ದಾರಿ ಎಲ್ಲರದ್ದಾಗಿದೆ. ಹೈನುಗಾರಿಕೆ ರೈತರ ಆರ್ಥಿಕ ಸಂಕಷ್ಟವನ್ನು ನಿವಾರಿಸಲು ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಜಾನುವಾರುಗಳ ಆರೋಗ್ಯ ಕಾಪಾಡುವುದು ಅತೀ ಮುಖ್ಯವಾಗಿದೆ ಎಂದು ಹೇಳಿದರು.

ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಲಿಂಗರಾಜ ದೊಡ್ಡಮನಿ ಮಾತನಾಡಿ, ‘ಜಾನುವಾರುಗಳಿಗೆ ಕಾಲುಬಾಯಿ ರೋಗವು ವೈರಾಣುವಿನಿಂದ ಬರುವ ಅಂಟು ಜಾಡ್ಯವಾಗಿದ್ದು, ಲಸಿಕೆ ಹಾಕಿಸುವುದೊಂದೇ ರೋಗ ನಿಯಂತ್ರಿಸಲು ಮಾರ್ಗ’ ಎಂದರು.

ಕಾಲುಬಾಯಿ ರೋಗವು ಹಸು, ಎತ್ತು, ಹೋರಿ, ಎಮ್ಮೆಗೆ ತಗುಲುವ ಮಾರಕ ರೋಗವಾಗಿದೆ. ಇದರಿಂದ ರೈತರಿಗೆ ಆರ್ಥಿಕ ನಷ್ಟ ಉಂಟು ಮಾಡಲಿದೆ. ಆದ್ದರಿಂದ ಜಾನುವಾರುಗಳ ರಕ್ಷಣೆ, ಸುರಕ್ಷತೆ ಬಗ್ಗೆ ಒತ್ತು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ಜಿಲ್ಲೆಯ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನಗಳ 4ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಡೆಸಿದರು.

ಈ ಕುರಿತು ಮಾಹಿತಿ ನೀಡಿದ ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಲಿಂಗರಾಜ ದೊಡ್ಡಮನಿ, ‘ ಜಿಲ್ಲೆಯಲ್ಲಿ 5 ಸಂಚಾರಿ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಜಾನು ವಾರುಗಳಿಗೆ ರೈತರ ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಹೇಳಿದರು.

ಪಾಲಿ ಕ್ಲೀನಿಕ್ನ ಉಪ ನಿರ್ದೇಶಕ ಡಾ.ತಿಮ್ಮಯ್ಯ, ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕ ಪ್ರಸನ್ನ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ರಾಜಶೇಖರ್(ಸೋಮವಾರಪೇಟೆ), ಡಾ.ಲತಾ ಪ್ರಸನ್ನ (ಮಡಿಕೇರಿ), ಡಾ.ನವೀನ್ (ವಿರಾಜಪೇಟೆ), ಡಾ.ಶಿಂಧೆ (ಕುಶಾಲನಗರ), ಡಾ.ಚಂದ್ರಶೇಖರ್ (ಪೊನ್ನಂಪೇಟೆ), ಡಾ.ವಿವೇಕ್ (ಜಿಲ್ಲಾ ಪ್ರತಿನಿಧಿ–ಸಂಚಾರಿ ಪಶು ಚಿಕಿತ್ಸಾ ಘಟಕ) ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-331195878

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.